SUDDILIVE || SHIKARIPURA
ಬೈಕ್ ಕಳವು, ಆರೋಪಿ ಬಂಧನ-Bike theft accused arrested
ಶಿರಾಳಕೊಪ್ಪದಲ್ಲಿ ಬೈಕ್ ಕಳುವಿನ ಆರೋಪಿಯನ್ನ ಪೊಲೀಸರು ಬಂಧಿಸಿ, ಆತನಿಂದ ಕಳುವಾದ ಬೈಕ್ ನ್ನ ವಶಕ್ಕೆ ಪಡೆಯಲಾಗಿದೆ.
ಶಿರಾಳಕೊಪ್ಪ ಟೌನ್ ನ ಮಠದಗದ್ದೆ ವಾಸಿಯಾದ ಇನಾಯತ್ ವುಲ್ಲಾ, (38) ಫೆ.21 ರಂದು ತಮ್ಮ ಹಿರೋ ಸ್ಪ್ಲೆಂಡರ್ ಪ್ರೋ ಬೈಕನ್ನು ಶಿರಾಳಕೊಪ್ಪ ಟೌನ್ ಆನವಟ್ಟಿ ರಸ್ತೆಯ ಬದಿಯಲ್ಲಿ ನಿಲ್ಲಿಸಿ ಹೋಗಿದ್ದು ಬೈಕ್ ಕಳ್ಳತನವಾಗಿತ್ತು. ನೀಡಿದ ದೂರಿನ ಮೇರೆಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣದಲ್ಲಿ ಕಳುವಾದ ವಾಹನ ಹಾಗೂ ಆರೋಪಿತರ ಪತ್ತೆಗಾಗಿ ಎಸ್ಪಿ ಮಿಥುನ್ ಕುಮಾರ್ ಜಿ. ಕೆ. ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ ಮತ್ತು ಎ. ಜಿ. ಕಾರಿಯಪ್ಪ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ಕೇಶವ ಕೆ.ಇ ಪೊಲೀಸ್ ಉಪಾಧೀಕ್ಷಕರು ಶಿಕಾರಿಪುರ ಉಪ ವಿಭಾಗರವರ ಮೇಲ್ವಿಚಾರಣೆಯಲ್ಲಿ ಸಂತೋಷ್ ಪಾಟೀಲ್ ಸಿಪಿಐ ಶಿಕಾರಿಪುರ ಟೌನ್ ವೃತ್ತ ರವರ ನೇತೃತ್ವದಲ್ಲಿ ಪ್ರಶಾಂತ್ ಕುಮಾರ ಟಿ ಬಿ, ಪಿ.ಎಸ್.ಐ ಶಿರಾಳಕೊಪ್ಪ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ, ಸಿಬ್ಬಂಧಿಗಳಾದ ಸಿ.ಹೆಚ್.ಸಿ- ಸಂತೋಷಕುಮಾರ ಆರ್, ಸಿ.ಪಿ.ಸಿ- ರಾಕೇಶ್ ಜಿ ಮತ್ತು ಸಲ್ಮಾನ್ ಖಾನ್ ಹಾಜಿ ರವರುಗಳನ್ನೊ ಒಳಗೊಂಡ ತನಿಖಾ ತಂಡವನ್ನು ರಚಿಸಲಾಗಿರುತ್ತದೆ.
ತನಿಖಾ ತಂಡವು ಪ್ರಕರಣದ ಆರೋಪಿತನಾದ ಅಬ್ದುಲ್ ಖಾಧರ್ @ ಸಮೀರ್, 20 ವರ್ಷ, ವಾಸ ಆಜಾದ ನಗರ ಆನವಟ್ಟಿ ಟೌನ್ ಈತನನ್ನು ದಸ್ತಗಿರಿ ಮಾಡಿ ಆರೋಪಿತನಿಂದ ಅಂದಾಜು ಮೌಲ್ಯ 30,000/- ರೂಗಳ ಹಿರೋ ಸ್ಪ್ಲೆಂಡರ್ ಪ್ರೋ ಬೈಕನ್ನು ಅಮಾನತ್ತು ಪಡಿಸಿಕೊಂಡಿರುತ್ತದೆ. ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.
Bike theft, accused arrested