SUDDILIVE || SHIVAMOGGA
ಶಿವಮೊಗ್ಗದಲ್ಲಿ ಮೇ ೨೪ ರಿಂದ ಹಣ್ಣು ಮೇಳ- Fruit fair in Shivamogga from May 24th
ಶಿವಮೊಗ್ಗ ಜಿಲ್ಲಾ ಹಾಪ್ ಕಾಮ್ಸ್ ವತಿಯಿಂದ ಮೇ 24 ಮತ್ತು 25 ರಂದು ಎರಡು ದಿನಗಳ ಕಾಲ ನಗರದಲ್ಲಿ ಮಾವು ಮತ್ತು ಹಲಸಿನ ಮೇಳ ಆಯೋಜಿಸಲಾಗಿದೆ. ಸುಮಾರು 10 ಬಗೆಯ ಹಣ್ಣು ಮತ್ತು ವಿಶೇಷ ಬಗ್ಗೆ ಹಲಸಿನ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ ಎಂದು ಶಿವಮೊಗ್ಗ ಅಧ್ಯಕ್ಷ ಆರ್ ವಿಜಯ್ ಕುಮಾರ್ ತಿಳಿಸಿದರು.
ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ ರೈತರು ಋತುಮಾನಕ್ಕೆ ಅನುಗುಣವಾಗಿ ಬೆಳೆಯುವ ತೋಟಗಾರಿಕೆ ಬೆಳೆಗಳಿಗೆ ಉತ್ತಮ ಮಾರುಕಟ್ಟೆ ಮತ್ತು ದರ ಒದಗಿಸು ಕೊಡುವ ಉದ್ದೇಶದೊಂದಿಗೆ ಈ ಮೇಳವನ್ನ ವಿನೋಬನಗರ ಕೃಷಿ ಉತ್ಪನ್ನ ಮಾರುಕಟ್ಟೆ ಜಾಗದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು. ಈ ಮೇಳಕ್ಕೆ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಲಿದ್ದು , ಅವರೊಂದಿಗೆ ಜಿಲ್ಲೆಯ ಜನಪ್ರತಿನಿಧಿಗಳು ಕೂಡ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಹಣ್ಣುಗಳ ಪ್ರದರ್ಶನ ಮತ್ತು ಮಾರಾಟಕ್ಕೆ 20 ಮಳೆಗಳನ್ನು ತೆರೆಯಲಾಗಿದ್ದು, ಕೋಲಾರ ಚಿಕ್ಕಬಳ್ಳಾಪುರ ರಾಮನಗರ ಸೇರಿದಂತೆ ಹಲವು ಭಾಗದ ರೈತರು ತಾವು ಬೆಳೆದ ಹಣ್ಣುಗಳನ್ನು ಮಾರಾಟಕ್ಕೆ ತರಲಿದ್ದಾರೆ ಎಂದರು. ರಸಪೂರಿ,ಮಲಗೋಬಾ, ಸಿಂದೂಲ, ರತ್ನಗಿರಿ ಸೇರಿದಂತೆ 10 ತಳಿಯ ಮಾವಿನ ಹಣ್ಣುಗಳು ಈ ಮಳದಲ್ಲಿ ಪ್ರದರ್ಶನ ಮತ್ತು ಮಾರಾಟಕ್ಕೆ ಇರಲಿವೆ ಎಂದು ತಿಳಿಸಿದರು.
Fruit fair