ಬಳ್ಳಾರಿ ಜೈಲಿನಲ್ಲಿ ಹರ್ಷ ಕೊಲೆ ಆರೋಪಿಗಳ ರಂಪಾಟ- Harsha murder accused on rampage in Bellary jail

 SUDDILIVE || SHIVAMOGGA

ಬಳ್ಳಾರಿ ಜೈಲಿನಲ್ಲಿ ಹರ್ಷ ಕೊಲೆ ಆರೋಪಿಗಳ ರಂಪಾಟ-Harsha murder accused on rampage in Bellary jail

rampage, bellary jail

ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ  ಆರೋಪಿಗಳು ಬಳ್ಳಾರಿ ಜೈಲಿನಲ್ಲಿ  ರಂಪಾಟ ಮಾಡುತ್ತಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ಹರ್ಷ ಕೊಲೆ ಪ್ರಕರಣದ ಹತ್ತು ಜನ ಆರೋಪಿಗಳ ಪೈಕಿ ಜಿಲಾನ್ ಹಾಗೂ ಸೈಯ್ಯದ್ ನಿಹಾಲ್ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಈ ಇಬ್ಬರೂ ಜೈಲಿನ ಸಿಬ್ಬಂದಿ, ಅಧಿಕಾರಿಗಳ ಜೊತೆ ನಿತ್ಯ ಜಗಳ ಮಾಡಿ ಅವಾಜ್ ಹಾಕಿ, ಕಿರಿಕ್ ಮಾಡುತ್ತಿದ್ದಾರೆ. ಕಿರಿಕ್‌ ಮಾಡುತ್ತಿರುವ ವಿಡಿಯೋಗಳನ್ನ ಮಾಧ್ಯಮಗಳು ಸುದ್ದಿ ಮಾಡಿವೆ. 

ನಿತ್ಯ ಒಂದೊಂದು ಸೌಲಭ್ಯ ಕೇಳಿ ಜೈಲು ಸಿಬ್ಬಂದಿಗೆ ಧಮ್ಕಿ ಹಾಕುತ್ತಿದ್ದ ಆರೋಪಿಗಳು, ಜೈಲಿನಲ್ಲಿ ನಡೆದ ಹಳೆ ಘಟನೆಗಳ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಹೇಳುತ್ತಿದ್ದಾರೆ. ನಮ್ಮನ್ನು ಸಾಮಾನ್ಯ ಕೈದಿಗಳಂತೆ ಟ್ರೀಟ್ ಮಾಡಿ ಪ್ರತ್ಯೇಕ ಕೊಠಡಿ ಕೊಡಿ, ವಿಶೇಷ ಸೌಲಭ್ಯ ನೀಡಿ ಎಂದು ಇಬ್ಬರು ಗಲಾಟೆ ಮಾಡುತ್ತಿದ್ದಾರೆ.

ಜೈಲಿನಲ್ಲಿ ಬೇರೇ ಬೇರೆ ಕೋಣೆಗೆ ಅಥವಾ ಜೈಲರ್ ಕೊಠಡಿಗೆ ಹೋಗುವಾಗ ಕಡ್ಡಾಯವಾಗಿ ಚೆಕಪ್ ಮಾಡಲಾಗುತ್ತದೆ. ಆದರೆ ನಮ್ಮನ್ನು ನೀವು ಪರಿಶೀಲನೆ ಮಾಡಬೇಡಿ ಎಂದು ಹೇಳುತ್ತಿದ್ದಾರೆ. ಅಷ್ಟೇ ಅಲ್ಲದೇ ಸಣ್ಣ ಪುಟ್ಟ ವಿಚಾರಕ್ಕೂ ಜೈಲು ಸಿಬ್ಬಂದಿಯನ್ನು ಆರೋಪಿಗಳು ನಿಂದಿಸುತ್ತಿದ್ದಾರೆ. 

ಆರೋಪಿಗಳು ಇದೇ ರೀತಿ ಕಿರಿಕ್ ಮಾಡಿ ಬೆಂಗಳೂರು, ಗುಲ್ಬರ್ಗ, ಧಾರವಾಡ ಜೈಲಿಗೆ ಹೋಗಿದ್ದರು. ಈಗ ಅದೇ ಚಾಳಿಯನ್ನು ಬಳ್ಳಾರಿ ಜೈಲಿನಲ್ಲೂ ಮುಂದುವರಿಸುತ್ತಿದ್ದಾರೆ.

Harsha murder accused on rampage in Bellary jail

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close