SUDDILIVE || SAGAR
ಶರಾವತಿ ಕಣಿವೆ ಯೋಜನಾ ಪ್ರದೇಶದಲ್ಲಿ ಹೈ ಅಲರ್ಟ್-High alert in Sharavati Valley Project area
ಭಾರತ ಹಾಗೂ ಪಾಕಿಸ್ತಾನ ನಡುವೆ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವ ಕಾರಣ ಶರಾವತಿ ಕಣಿವೆ ಯೋಜನಾ ಪ್ರದೇಶದಲ್ಲಿ ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿ) ಭದ್ರತಾ ವ್ಯವಸ್ಥೆಯನ್ನು ಹೈ ಅಲರ್ಟ್ ಮಾಡಿ ಇರಿಸಲಾಗಿದೆ.
ಲಿಂಗನಮಕ್ಕಿ ಅಣೆಕಟ್ಟು, ಲಿಂಗನಮಕ್ಕಿ ಜಲವಿದ್ಯುದಾಗಾರ, ಮಹಾತ್ಮ ಗಾಂಧಿ ಮತ್ತು ಶರಾವತಿ ಜಲವಿದ್ಯುದಾಗಾರಗಳಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಕಮಾಂಡೊ ತರಬೇತಿ ಪಡೆದ ಅನುಭವಿ ಸಿಬ್ಬಂದಿ ಭದ್ರತಾ ಕಾರ್ಯಪಡೆಯ ಕಾವಲು ಇದೆ.
ಎಲ್ಲ ಭದ್ರತಾ ಸಿಬ್ಬಂದಿ ಶರಾವತಿ ಕೇಂದ್ರ ಸ್ಥಾನದಲ್ಲಿಯೇ ಇರಬೇಕು. ಯಾವುದೇ ತುರ್ತು ಸಂದರ್ಭದಲ್ಲಿ ಕರ್ತವ್ಯ ನಿರ್ವಹಣೆಗೆ ಸದಾ ಸಿದ್ಧರಿರಬೇಕು ಎಂಬ ಸಂದೇಶ ನೀಡಿದ್ದಾಗಿ ಯೋಜನಾ ಪ್ರದೇಶದ ಭದ್ರತೆಯ ಹೊಣೆ ಹೊತ್ತಿರುವ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ (ಕೆಎಸ್‌ಐಎಸ್‌ಎಫ್) ಇನ್‌ಸ್ಪೆಕ್ಟರ್ ಬಿ.ವಿ. ಕುಮಾರ್ ಮಾಹಿತಿ ನೀಡಿದ್ದಾರೆ.
ಆದರೆ, ಮಾಕ್ ಡ್ರಿಲ್ ತಯಾರಿ ಬಗ್ಗೆ ಯಾವುದೇ ರೀತಿಯ ಆದೇಶಗಳು ಈವರೆಗೂ ದೊರೆತಿಲ್ಲ. ಮೇಲಧಿಕಾರಿಗಳ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಶರಾವತಿ ಕಣಿವೆಯ ಭದ್ರತಾ ವಿಭಾಗದ ಮುಖ್ಯ ಎಂಜಿನಿಯರ್ ಆರ್.ರಮೇಶ್ ತಿಳಿಸಿದರು.
High alert in Sharavati Valley