SUDDILIVE || RIPPENPETE
ಅಕ್ರಮ ಮದ್ಯ ಮಾರಾಟ: ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ-Illegal liquor sale: Raids at four locations, accused arrested along with goods
ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ನಾಲ್ಕು ಸ್ಥಳಗಳಲ್ಲಿ ರಿಪ್ಪನ್ ಪೇಟೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.ರಿಪ್ಪನ್ ಪೇಟೆ , ಹುಂಚ ಹಾಗೂ ಕೆಂಚನಾಲ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಆರೋಪಿಗಳನ್ನು ಮಾಲು ಸಮೇತ ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಪ್ರಕರಣ 1
ಹುಂಚ ಗ್ರಾಪಂ ವ್ಯಾಪ್ತಿಯ ನಿವುಣೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ನಿವುಣೆಯ ಕುಮಾರ್ ಎಂಬಾತತನನ್ ಕಿರಾಣಿ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಕುಮಾರ್ ನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.
ಪ್ರಕರಣ 2
ರಿಪ್ಪನ್ ಪೇಟೆ ಪಟ್ಟಣದ ಸಾಗರ ರಸ್ತೆಯ ಪುನೀತ್ ರಾಜ್‍ಕುಮಾರ್ ಸರ್ಕಲ್ ಬಳಿ ರಾಜೇಶ್ ಎಂಬಾತ ತನ್ನ ಹೊಟೇಲ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತಿದ್ದ ಮಾಹಿತಿಯ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಹೊಟೇಲ್ ಮಾಲೀಕ ರಾಜೇಶ್ ನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.
ಪ್ರಕರಣ 3
ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕೆಂಚನಾಲ ಗ್ರಾಮದ ನಾಗರಾಜ್ ಎಂಬಾತನ ಕಿರಾಣಿ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಬಗ್ಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಅಂಗಡಿ ಮಾಲೀಕ ನಾಗರಾಜ್ ನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.
ಪ್ರಕರಣ 4
ಕೋಡೂರು ಗ್ರಾಪಂ ವ್ಯಾಪ್ತಿಯ ಶಾಂತಪುರ ಸಮೀಪದ ಕೋಟೆಕೆರೆ ಗ್ರಾಮದಲ್ಲಿ ವಿನಾಯಕ ಎಂಬಾತನ ಕಿರಾಣಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಮಾಹಿತಿಯ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಅಂಗಡಿಯ ಮಾಲೀಕ ವಿನಾಯಕ್ ನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.
ದಾಳಿಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ , ಸಂತೋಷ್ ಕೊರವರ , ರಾಮಚಂದ್ರ ಮತ್ತು ನಾಗೇಶ್ ಇದ್ದರು.
Illegal liquor sale: Raids at four locations