ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ- Neutering surgery for stray dogs

Suddilive || Shivamogga

ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ -Neutering surgery for stray dogs

 

Stray, dogs

ಶಿವಮೊಗ್ಗ ಮಹಾನಗರ ಪಾಲಿಕೆಯು ಮೇ 05 ರಿಂದ ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿ, ರೇಬಿಸ್ ವಿರುದ್ಧ ಲಸಿಕೆ ಹಾಗೂ ಕಿವಿಗೆ ಗುರುತು ಮಾಡಿ ಕಾರ್ಯಾಚರಣೆ ಪೂರ್ಣವಾದ ಬಳಿಕ ಅವುಗಳನ್ನು ಹಿಡಿದ ಸ್ಥಳಗಳಲ್ಲಿ ಬಿಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. 

 ಈ ಶಸ್ತ್ರಚಿಕಿತ್ಸೆಯು ಮಾನವೀಯ ಹಾಗೂ ವೈಜ್ಞಾನಿಕ ರೀತಿಯಲ್ಲಿ ಶ್ವಾನಗಳ ಸಂತತಿಯನ್ನು ನಿಯಂತ್ರಣದಲ್ಲಿಡುವುದು, ಪ್ರಾಣಿಜನ್ಯ ರೋಗಗಳಾದ ರೇಬಿಸ್, ಲೆಪ್ಪೋಸ್ಟೈರಾ ಇತ್ಯಾದಿ ರೋಗಗಳಿಂದ ಸಾರ್ವಜನಿಕ ಆರೋಗ್ಯ ರಕ್ಷಣೆ ಮಾಡುವುದು ಹಾಗೂ ಬೀದಿನಾಯಿಗಳಿಂದ ಸಾರ್ವಜನಿಕರಿಗಾಗುವ ತೊಂದರೆಗಳಿಂದ ಮುಕ್ತಗೊಳಿಸುವ ಉದ್ದೇಶ ಹೊಂದಿದೆ. 

 ಈ ಶಸ್ತ್ರಚಿಕಿತ್ಸೆಯು ರಾಜೀವ್‌ಗಾಂಧಿ ಬಡಾವಣೆಯ ಮಹಾವೀರ್ ಗೋಶಾಲೆ ಪಕ್ಕ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಪಾಲಿಕೆ ಸಹಾಯವಾಣಿ ಸಂ.: 18004257677 ನ್ನು ಸಂಪರ್ಕಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Neutering surgery for stray dogs

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close