ಭಾರತೀಯ ಸೈನೆಗೆ ಆತ್ಮವಿಶ್ವಾಸ ಹೆಚ್ಚಿಸಲು ನೂರಾನಿ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ-Special prayer to Indian army

SUDDILIVE || SAGAR

ಭಾರತೀಯ ಸೈನೆಗೆ ಆತ್ಮವಿಶ್ವಾಸ ಹೆಚ್ಚಿಸಲು ನೂರಾನಿ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ-Special prayer to Indian army

Prayer, masjid

ಪಾಕಿಸ್ತಾನ ಹಾಗೂ ಭಾರತದ ನಡುವೆ ಯುದ್ದದ ಕಾರ್ಮೋಡ ಕವಿದಿದೆ. ಈ ಕಾರ್ಮೋಡದ ಹಿನ್ನೆಲೆಯಲ್ಲಿ ಭಾರತೀಯ ಸೇನೆಗೆ ಆತ್ಮ ವಿಶ್ವಾಸ ಹೆಚ್ಚಿಸಲು  ಎಸ್ ಎನ್ ನಗರದ ನೂರಾನಿ ಮಸ್ಜಿದ್ ನಲ್ಲಿ ಮುಸ್ಲಿಂ ಸಮುದಾಯದ ವತಿಯಿಂದ  ವಿಶೇಷ ಪ್ರಾರ್ಥನೆ ಸಲ್ಲಿಸಿದರು.


ಕಾಶ್ಮೀರ ಕಣಿವೆಯ ಪೆಹಲ್ಗಾಮ್ ನಲ್ಲಿ ಉಗ್ರಗಾಮಿಗಳು 26 ಭಾರತೀಯ ಪ್ರವಾಸಿಗರನ್ನು ಹತ್ಯೆಗೈದ ಹಿನ್ನೆಲೆಯಲ್ಲಿ ಭಾರತೀಯ ಸೈನ್ಯ “ಅಪರೇಷನ್ ಸಿಂಧೂರ ” ಎಂಬ ಹೆಸರಿನಲ್ಲಿ ನಡೆಸಿದ ದಾಳಿಯಲ್ಲಿ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಯಶಸ್ವಿಯಾಗಿ ಧ್ವಂಸಗೊಳಿಸಿದ್ದು ಪಾಕಿಸ್ತಾನ ಹಾಗೂ ಭಾರತದ ನಡುವೆ ನಡೆಯುತ್ತಿರುವ ಯುದ್ದದ  ಕಾರ್ಮೋಡದ ಹಿನ್ನೆಲೆಯಲ್ಲಿ ನಮ್ಮ ದೇಶದ ಹೆಮ್ಮೆಯ ಸೈನಿಕರಿಗೆ ಶಕ್ತಿ ತುಂಬಲು ಅವರ ಶ್ರೇಯಸ್ಸಿಗಾಗಿ ರಾಜ್ಯದ ಎಲ್ಲಾ ಮಸೀದಿಗಳಲ್ಲಿ ಪ್ರಾಥೀಸಲು ಕರ್ನಾಟಕ ಸರ್ಕಾರದ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಬಿ ಜೆಡ್ ಜಮೀರ್ ಅಹಮದ್ ಖಾನ್ ರವರ ಸೂಚನೆಯಂತೆ ಶಿವಮೊಗ್ಗ ಜಿಲ್ಲೆಯ ಸಾಗರ ನಗರ  ವ್ಯಾಪ್ತಿಯ ಶಿವಪ್ಪ ನಾಯಕ ನಗರದ ನೂರನಿ ಮಸ್ಜಿದ್ ನಲ್ಲಿ ಮುಸ್ಲಿಂ ಸಮುದಾಯದವರು ಶುಕ್ರವಾರದ ನಮಾಜಿನ ನಂತರ ವಿಷೇಶ ಪ್ರಾರ್ಥನೆ ಸಲ್ಲಿಸಿದರು.

Spetial prayer to Indian army

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close