ಉಸ್ತುವಾರಿ ಸಚಿವರಿಂದ ಅಹವಾಲು ಸ್ವೀಕಾರ-the Minister in charge

Suddilive || Shivamogga

ಉಸ್ತುವಾರಿ ಸಚಿವರಿಂದ ಅಹವಾಲು ಸ್ವೀಕಾರ-Acceptence of the Report of the public from the Minister in charge

Minister, charge

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಸೋಮವಾರದಂದು ನಗರದ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದರು.

ಶಿವಮೊಗ್ಗ-ಭದ್ರಾವತಿ ಮೀಟರ್ ಟ್ಯಾಕ್ಸಿ ಅಸೋಸಿಯೇಷನ್‌ನವರು ತಮ್ಮ ಟ್ಯಾಕ್ಸಿಗಳಿಗೆ ಜಿಪಿಎಸ್ ಮತ್ತು ಟ್ರಾö್ಯಕಿಂಗ್ ವ್ಯವಸ್ಥೆ ಅಳವಡಿಕೆ ಮಾಡಬೇಕೆಂಬ ಆದೇಶವಿರುತ್ತದೆ. ಈ ವ್ಯವಸ್ಥೆ ಇಲ್ಲದಿದ್ದಲ್ಲಿ ಆರ್‌ಟಿಓ ಕಚೇರಿಯಿಂದ ಎಫ್‌ಸಿ ಮಾಡಿಸಲು ಬರುವುದಿಲ್ಲ. ಆದರೆ ಈ ವ್ಯವಸ್ಥೆ ಅಳವಡಿಕೆಯಿಂದ ಟ್ಯಾಕ್ಸಿ ನಡೆಸುವವರಿಗೆ ಅಧಿಕ ಖರ್ಚು ಬರುತ್ತದೆ. ಹಾಗೂ ಈ ಟ್ಯಾಕ್ಸಿಗಳು ಶಿವಮೊಗ್ಗ ಮತ್ತು ಭದ್ರಾವತಿ ನಡುವೆ ಮಾತ್ರ ಕಾರ್ಯಾಚರಣೆ ಮಾಡುತ್ತಿರುವ ಕಾರಣ ಮತ್ತು ಅಧಿಕ ಖರ್ಚು ಆಗುವುದರಿಂದ ಸದರಿ ವ್ಯವಸ್ಥೆಯನ್ನು ರದ್ದುಪಡಿಸಿ ಅನುಕೂಲ ಮಾಡಿಕೊಡಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿದರು.

ಪ್ರಿಯಾಂಕ ಬಡಾವಣೆ ನಿವಾಸಿಗಳ ಹಿತರಕ್ಷಣಾ ವೇದಿಕೆಯ ಸದಸ್ಯರು ಪ್ರಿಯಾಂಕ ಬಡಾವಣೆಯಲ್ಲಿ ಉದ್ದ ಮತ್ತು ಅಡ್ಡ ರಸ್ತೆಗೆ ಹೊಸದಾಗಿ ಡಾಂಬರೀಕರಣ ಮಾಡಿಸಿಕೊಡಬೇಕೆಂದು ಮನವಿ ಮಾಡಿದರು.

ಜಿಲ್ಲಾ ತೆಲುಗು ಅರುಂಧತಿ ಆದಿಕರ್ನಾಟಕ ಸಮಾಜದವರು ನಗರದ 27 ನೇ ವಾರ್ಡಿನಲ್ಲಿ ಅರ್ಧಕ್ಕೆ ನಿಲ್ಲಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಪೂರ್ಣಗೊಳಿಸಲು ರೂ.50 ಲಕ್ಷ ಅನುದಾನವನ್ನು ಮಂಜೂರು ಮಾಡಬೇಕೆಂದು ಕೋರಿದರು.

ಬನಶಂಕರಿ ಬಡಾವಣೆಯ ಆಂಜನೇಯ ಸಮಿತಿಯವರು ದೇವಸ್ಥಾನ ನಿರ್ಮಿಸಲು ಅನುದಾನ ನೀಡುವಂತೆ ಕೋರಿದರು. ಹಾಗೂ ಉದ್ಯೋಗ ಒದಗಿಸುವಂತೆ ಕೋರಿ ಇಬ್ಬರು ಮಹಿಳೆಯರು ಅರ್ಜಿ ನೀಡಿದರು. ಸಚಿವರು 10 ಕ್ಕೂ ಅಧಿಕ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದರು.

the Minister in charge


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close