ತುಂಗ ಡ್ಯಾಂನ ನದಿ ಪಾತ್ರದ ಜನರಿಗೆ ಎಚ್ಚರಿಕೆ-Tunga river dam basin

 SUDDILIVE || SHIVAMOGGA

ತುಂಗ ಡ್ಯಾಂನ ನದಿ ಪಾತ್ರದ ಜನರಿಗೆ ಎಚ್ಚರಿಕೆ-Warning to people living in the Tunga river dam basin

Tunga, dam


ತುಂಗಾ ಮೇಲ್ದಂಡೆ ಯೋಜನೆ ಡ್ಯಾಂನ ನದಿ ಪಾತ್ರದಲ್ಲಿ ಬರುವ ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಕರ್ನಾಟಕ ನೀರಾವರಿ ನಿಗಮಿತ ಎಚ್ಚರಿಕೆ ನೀಡಿದೆ. 

ತುಂಗಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಕಳೆದ ಎರಡು ದಿವಸಗಳಿಂದ ಧಾರಕಾರವಾಗಿ ಮಳೆಯಾಗುತ್ತಿದ್ದು, ಜಲಾಶಯ ಭರ್ತಿಯಾಗಿದೆ. ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನೀರನ್ನು ಬಿಡುವ ಸಂಭವವಿರುತ್ತದೆ. 

ಆದ್ದರಿಂದ ತುಂಗಾ ಜಲಾಶಯದ ಕೆಳಭಾಗದ ನದಿ ಪಾತ್ರದಲ್ಲಿ ಬರುವ ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡಬಾರದು ಹಾಗೂ ದನಕರುಗಳನ್ನು, ಪ್ರಾಣಿಗಳನ್ನು ಮೇಯಲು ಬಿಡುವುದು ಮಾಡಬಾರದೆಂದು ಹಾಗೂ ತುಂಗಾ ನದಿಯ ಪಾತ್ರದಲ್ಲಿ ಬರುವ ಗ್ರಾಮಗಳ ಪ್ರದೇಶದ ಗ್ರಾಮಸ್ಥರಿಗೆ ನದಿ ಪಾತ್ರದಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆಯಿಂದಿರಲು ಪ್ರಕಟಣೆಯಲ್ಲಿ ತಿಳಿಸಿದೆ. 

Tunga river dam basin

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close