ಹಿರಿಯ ಪತ್ರಕರ್ತ ಎಲ್. ಆನಂದರಾಮನ್ ನಿಧನ-passes away

Suddilive || Shivamogga

ಹಿರಿಯ ಪತ್ರಕರ್ತ ಎಲ್. ಆನಂದರಾಮನ್ ನಿಧನ-Senior journalist L. Anandaraman passes away

Passes, away

ಹಳೇನಗರದ ಪತ್ರಿಕಾ ಭವನ ಟ್ರಸ್ಟ್ ಅಜೀವ ಸದಸ್ಯರು, ಹಿರಿಯ ಪತ್ರಕರ್ತರಾದ ಎಲ್. ಆನಂದರಾಮನ್(೭೧) ಸೋಮವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ನಿಧನರಾಗಿದ್ದಾರೆ.  

ಶ್ರೀಯುತರು,  ಪತ್ನಿ ಮಂಜುಳಾ, ಪುತ್ರಿಯರಾದ ರಕ್ಷಾ ಮತ್ತು ರಶ್ಮಿ ಹಾಗು ಅಳಿಯಂದಿರು, ಮೊಕ್ಕಳನ್ನ ಅಗಲಿದ್ದಾರೆ.  ಸುಮಾರು ೩ ದಶಕಗಳಿಗೂ ಹೆಚ್ಚು ಕಾಲ ಪತ್ರಿಕಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕನ್ನಡಪ್ರಭ ಮತ್ತು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ದಿನ ಪತ್ರಿಕೆಗಳ ವಿತರಕರಾಗಿ, ವರದಿಗಾರರಾಗಿ ದೀರ್ಘಾವಧಿ ಸೇವೆಲ್ಲಿಸಿದ್ದರು. 

ಶ್ರೀಯುತ ಎಲ್ ಆನಂದರಾಮನ್  (71) ಸೋಮವಾರ ಬೆಳಗ್ಗೆ   ಬೆಂಗಳೂರಿನಲ್ಲಿ ನಿಧನರಾಗಿರುತ್ತಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಆಗಲಿದ್ದಾರೆ. ಆನಂದ್ ರಾಮನವರ ಇಚ್ಛೆಯಂತೆ ಅವರ ದೇಹವನ್ನು ಆಸ್ಪತ್ರೆಗೆ ದಾನ ಮಾಡಲಾಗಿದೆ.

ಎಲ್ ಆನಂದ್ ರಾಮನ್ ರವರು ಕನ್ನಡಪ್ರಭ ಮತ್ತು ಇಂಡಿಯನ್ ಎಕ್ಸ್ ಪ್ರೆಸ್ ಭದ್ರಾವತಿ ವರದಿಗಾರರಾಗಿ, ಕ್ರಿಕೆಟ್ ಆಂಪೇರ್ ರಾಗಿ, ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಮೃತರ ಆತ್ಮಕ್ಕೆ ಶಾಂತಿ ದೊರೆಯಲೆಂದು ತಾಲೂಕು ಕಾರ್ಯ ನಿರ್ವತ ಪತ್ರಕರ್ತರ ಸಂಘ ಸಂತಾಪ ಸೂಚಕ ಸಭೆಯನ್ನು ನಡೆಸಿತು. ಮೃತರ ಆತ್ಮಕ್ಕೆ ಶಾಂತಿ ದೊರೆಯಲೆಂದು ತಾಲೂಕು ಕಾರ್ಯ ನಿರ್ವತ ಪತ್ರಕರ್ತರ ಸಂಘ ಸಂತಾಪ ಸೂಚಕ ಸಭೆಯನ್ನು ನಡೆಸಿತು.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಶಾಖೆಯ ಉಪಾಧ್ಯಕ್ಷರಾಗಿ ಹಾಗು ಪತ್ರಿಕಾ ಭವನ ಟ್ರಸ್ಟ್ ಅಜೀವ ಸದಸ್ಯರಾಗಿದ್ದು, ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದರು.  ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಪ್ರಸಾದ್ ಸರ್ವಿಸ್ ಸ್ಟೇಷನ್ ಪೆಟ್ರೋಲ್ ಬಂಕ್ ಮಾಲೀಕರಾಗಿದ್ದರು. 

ಅಲ್ಲದೆ ಆನಂದರಾಮನ್‌ರವರು ಕ್ರಿಕೆಟ್ ತರಬೇತಿದಾರರಾಗಿ ಸಹ ಗುರುತಿಸಿಕೊಳ್ಳುವ ಮೂಲಕ ಹಲವಾರು ಪಂದ್ಯಗಳಲ್ಲಿ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದರು. ಕೆಲವು ವರ್ಷಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ ಚೇತರಿಸಿಕೊಂಡಿದ್ದರು. ನಂತರ ಬೆಂಗಳೂರಿನಲ್ಲಿ ವಾಸವಾಗಿದ್ದರು. 

ವರ ನಿಧನಕ್ಕೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ಹಾಗು ತಾಲೂಕು ಶಾಖೆ ಪದಾಧಿಕಾರಿಗಳು ಹಾಗು ಸದಸ್ಯರು, ಪತ್ರಿಕಾ ಭವನ ಟ್ರಸ್ಟ್ ಪದಾಧಿಕಾರಿಗಳು ಮತ್ತು ಟ್ರಸ್ಟಿಗಳು ಸಂತಾಪ ಸೂಚಿಸಿದ್ದಾರೆ.

passes away

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close