SUDDILIVE || SHIVAMOGGA
ಮೂರು ದಿನ, ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು-Three-day, state-level sports and cultural competitions for state government employees
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಮತ್ತು ಜಿಲ್ಲಾ ಶಾಖೆ ಇವರ ಸಹಯೋಗದಲ್ಲಿ ರಾಜ್ಯ ಸರ್ಕಾರಿ ನೌಕರರ ರಾಜ್ಯ ಸರ್ಕಾರಿ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಮೇ.18,19 ಹಾಗೂ 20 ರಂದು ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಮೇ.18 ರಂದು ಎನ್ ಇಎಸ್ ಗ್ರೌಂಡ್ ನಲ್ಲಿ ಬೆಳಿಗ್ಗೆ 9 ಗಂಟೆಯಿಂದ ನೋಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದೆ. ಆನ್ ಲೈನ್ ಮೂಲಕವೂ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 142 ಈವೆಂಟ್ಸ್ ನಡೆಯಲಿದ್ದು, 15000 ಜನ ನೌಕರರು ಈ ಸ್ಪರ್ಧೆಗಳಲ್ಲಿ ಭಾಗಿಯಾಗಲಿದ್ದಾರೆ ಎಂದರು.
97, ವೈಯುಕ್ತಿಕ, 16 ತಂಡಗಳ ಸ್ಪರ್ಧೆ 97 ವೈಯುಕ್ತಿಕ ಜಾನಪದ ಸ್ಪರ್ಧೆ 16 ತಂಡಗಳಿಂದ ಸ್ಪರ್ಧೆ ನಡೆಯಲಿದ್ದು ಒಟ್ಟು 280 ಸ್ಪರ್ಧೆಗಳು ನಡೆಯಲಿದೆ ಎಂದರು. 18 ನಾಟಕಗಳ ಪ್ರದರ್ಶನ ಎರಡು ದಿನಗಳ ವರೆಗೆ ನಡೆಯಲಿದೆ, 40 ಬಸ್ ಗಳು ಓಡಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಿಸಿಎಂ, ಅಲ್ಪಸಂಖ್ಯಾತರ ಹಾಸ್ಟೆಲ್ ಗಳು ಸೇರಿ ಹಲವೆಡೆ ವಸತಿ ವ್ಯವಸ್ಥೆ ಮಾಡಲಾಗಿದೆ. 2-2½ ಕೋಟಿ ಹಣ ಕಳೆದ ಬಾರಿ ಕರ್ಚಾಗಿತ್ತು. ಈ ಬಾರಿಯೂ ರಾಜ್ಯ ಸರ್ಕಾರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಲರ್ಧೆಗೆ ಹಣ ನೀಡಲಿದೆ ಎಂದರು.
ಭಾನುವಾರ ಸಂಜೆ 5 ಗಂಟೆಗೆ ನೆಹರೂ ಕ್ರೀಡಾಂಗಣದಲ್ಲಿ ನಡೆಯುವ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನ ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿಕೆಶಿ ಧ್ವಜಾರೋಹಣ ಮಾಡಲಿದ್ದಾರೆ. ಸಚಿವ ಮಧು ಬಂಗಾರಪ್ಪ ಕ್ರೀಡಾ ಜ್ಯೋತಿ ಸ್ವೀಕರಿಸಲಿದ್ದಾರೆ. ಸಂಸದ ರಾಘವೇಂದ್ರ, ಶಾಸಕರಾದ ಸಂಗಮೇಶ್ವರ್ ಹಾಗೂ ಗೋಪಾಲ ಕೃಷ್ಣ ಬೇಳೂರು ಸರ್ಕಾರಿ ನೌಕರರನ್ನ ಸನ್ಮಾನಿಸಲಿದ್ದಾರೆ. ಈ ಕ್ರೀಡಾ ಕೂಟ 2017 ರಂದು ಶಿವಮೊಗ್ಗದಲ್ಲಿ ನಡೆದಿತ್ತು. 8 ವರ್ಷಗಳ ಬಳಿಕ ಮತ್ತೆ ಶಿವಮೊಗ್ಗದಲ್ಲಿ ನಡೆಯುತ್ತಿದೆ
ರಾತ್ರಿ 7 ಗಂಟೆಯಿಂದ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಅವರಿಂದ ಗಾನಸುಧೆ-ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಮೇ.19 ರಂದು ಸಂಜೆ ಜಾನಪದ ದಿಬ್ಬಣ ನಡೆಯಲಿದೆ. ಮೇ.20 ರಂದು ಸಂಜೆ ಕುವೆಂಪು ರಂಗ ಮಂದಿರದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಟ್ರೋಫಿ ಮತ್ತು ನೆನಪಿನ ಕಾಣಿಕೆ ನೀಡಲಾಗುವುದು ಎಂದರು.
state-level sports and cultural competitions