SUDDILIVE || SHIVAMOGGA
ಜಿಲ್ಲಾ ಪಂಚಾಯಿತಿ ಗೇಟ್ ಬಳಿ ಬಿಜೆಪಿ ಪ್ರತಿಭಟನೆ-BJP protests near Zilla Panchayat gate
ಬಿಜೆಪಿ ಶಿವಮೊಗ್ಗ ನಗರ ಹಾಗೂ ಬಿಜೆಪಿ ಶಿವಮೊಗ್ಗ ಗ್ರಾಮಾಂತರದ ವತಿಯಿಂದ ಜಿಲ್ಲಾ ಪಂಚಾಯಿತಿ ಮುಂಭಾಗದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆದಿದೆ.
ರಾಜ್ಯದ ಭ್ರಷ್ಟ ಸರ್ಕಾರದ ವಿರುದ್ಧ ಪ್ರತಿಭಟನೆ, ರಾಜೀವ್ ಗಾಂಧಿ ಯೋಜನೆಯ ವಸತಿ ಮನೆಗಳ ಹಗರಣ ಹಾಗೂ ಮುಸಲ್ಮಾನರಿಗೆ ಮಿತಿಮೀರಿದ ಮೀಸಲಾತಿ ಕೊಡುತ್ತಿರುವ ರಾಜ್ಯ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೀದಿಗಿಳಿದಿದೆ.
ಈ ಪ್ರತಿಭಟನೆಯಲ್ಲಿ ಶಾಸಕರಾದ ಎಸ್ ಎನ್ ಚನ್ನಬಸಪ್ಪನವರು, ಜಿಲ್ಲಾಧ್ಯಕ್ಷ ಜಗದೀಶ್ ಮಾಜಿ ಪಾಲಿಕೆ ಸದಸ್ಯರುಗಳು, ಜಿಲ್ಲಾ ಪದಾಧಿಕಾರಿಗಳು, ನಗರ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
BJP protests near Zilla Panchayat gate