SUDDILIVE || BANGALORU
ಬಿವೈ ಆರ್ ಮಗನ ಆರತಕ್ಷತೆ ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಬಾಗಿ-Dignitaries bow at BYR's son's reception
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಎಸ್ ವೈ ಮೊಮ್ಮಗ ಹಾಗೂ ಸಂಸದ ರಾಘವೇಂದ್ರ ಅವರ ಸುಪುತ್ರ ಸುಭಾಷ್ ಹಾಗೂ ಶ್ರಾವಣರವರ ಆರತಕ್ಷತೆ ಸಮಾರಂಭ ನಿನ್ನೆ ಅದ್ದೂರಿಯಾಗಿ ನಡೆಯಿತು.
ಇಂದು ಭಾನುವಾರ ದಾಂತಪ್ಯ ಜೀವನಕ್ಕೆ ಕಾಲಿಡಲಿರುವ ಈ ದಂಪತಿಗಳ ಆರತಕ್ಷತೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಜಮೀರ್ ಅಹಮದ್ ಬೈರತಿ ಸುರೇಶ್ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾಕ್ಟರ್ ಶಾಲಿನಿ ರಜನೀಶ್ ಸೇರಿದಂತೆ ಹಲವಾರು ಗಣ್ಯಾತಿ ಗಣ್ಯರು ಭಾಗಿಯಾಗಿದ್ದರು.
ಸಿಎಂ ಸಿದ್ದರಾಮಯ್ಯ ಅವರಿಗೆ ಸಂಸದ ಬಿವೈ ರಾಘವೇಂದ್ರ ಶಾಲು ಹೊದಿಸಿ ಗೌರವಿಸಿದರೆ, ರಾಘವೇಂದ್ರರ ಪತ್ನಿ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಗೆ ಶಾಲು ಹೊದಿಸಿ ಸ್ವಾಗತಿಸಿದರು. ಮಾರ್ಚ್ 24ರಂದು ಕಲ್ಬುರ್ಗಿಯಲ್ಲಿ ಬಿವೈ ಆರ್ ಪುತ್ರನ ನಿಶ್ಚಿತರ್ಥ ಕಾರ್ಯಕ್ರಮ ನಡೆದಿತ್ತು. ಸುಭಾಷ್ ಕಲಬುರ್ಗಿಯ ಮಹಾ ದಾಸೋಹಿ ಶರಣಬಸವೇಶ್ವರ ಸಂಸ್ಥಾನದ ಲಿಂಗರಾಜಪ್ಪ ಅಪ್ಪ-ದೀಪಾಲಿ ದಂಪತಿಯ ಪುತ್ರಿ ಶ್ರಾವಣ ಇವರನ್ನು ಇಂದು ವರಿಸಲಿದ್ದಾರೆ.
ನಿನ್ನೆ ನಡೆದ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಗೌರಾವನ್ವಿತ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್, ಕೇಂದ್ರ ಸಚಿವ ಕುಮಾರ್ ಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಪುತ್ರ ನಿಖಿಲ್ ಕುಮಾರ ಸ್ವಾಮಿ ಹಾಗೂ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಸಹ ಪಾಲ್ಗೊಂಡು ನವ ವಧುವರರಿಗೆ ಶುಭ ಹಾರೈಸಿದರು.
BYR's son's reception