SUDDILIVE || SHIVAMOGGA
ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ ಅಭಿಯಾನ-Free notebook distribution campaign for government school children
ಸರ್ಜಿ ಫೌಂಡೇಶನ್ ವತಿಯಿಂದ 15 ಸರ್ಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ ಅಭಿಯಾನಕ್ಕೆ ಇಂದು ಎಂಎಲ್ಸಿ ಡಾ. ಧನಂಜಯ್ ಸರ್ಜಿ ಚಾಲನೆ ನೀಡಿದರು
ಸರ್ಜಿ ಫೌಂಡೇಶನ್ ಮತ್ತು ದಿ ಶಿವಮೊಗ್ಗ ಮಲ್ಟಿ ಪರ್ಪಸ್ ಸೋಶಿಯಲ್ ಸರ್ವಿಸ್ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ತಾಲೂಕಿನ 15 ಸರ್ಕಾರಿ ಶಾಲೆಗಳ 900ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಅಭಿಯಾನದ ಅಂಗವಾಗಿ ಹಂಚಲಾಯಿತು.
ಇಂದು ಶಿವಮೊಗ್ಗ ನಗರದ ಸೀಗೆಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಂಗ್ಲ ಮತ್ತು ಕನ್ನಡ ಮಾಧ್ಯಮದ ಎರಡು ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಹರಕೆರೆಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಾಯಿತು.
Free notebook distribution