ಕಾಂತಾರ ಸಿನಿಮಾ ಸಹಕಲಾವಿದ ಹೃದಯಾಘಾತದಿಂದ ಸಾವು- Kantara's film co-star dies

SUDDILIVE || THIRTHAHALLI

ಕಾಂತಾರ ಸಿನಿಮಾ ಸಹಕಲಾವಿದ ಹೃದಯಾಘಾತದಿಂದ ಸಾವು-Kantara's film co-star dies of heart attack



ಕಾಂತರ-1 ಚಲನಚಿತ್ರದ ಸಹ ಕಲಾವಿದ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆಗುಂಬೆ ಹೋಂ ಸ್ಟೇಯಲ್ಲಿ ಸಾವಾಗಿರುವುದು ಕಾಂತಾರ ಸಿನಿಮಾ ಶೂಟಿಂಗ್ ವೇಳೆ ಇದು ಮೂರನೇ ಸಾವಾಗಿದೆ. 

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಕಾಂತರ1ರ ಚಲನಚಿತ್ರದ ಕಲಾವಿದ ವಿಜು ವಿ. ಕೆ ಎಂಬ ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ಸಾವಾಗಿದ್ದಾನೆ. ಕಾಂತರ ಚಲನಚಿತ್ರಕ್ಕಾಗಿ ಆಗುಂಬೆ ಸಮೀಪದ ಹೋಂ ಸ್ಟೇ ಒಂದರಲ್ಲಿ ವಿಜು ತಂಗಿದ್ದರು. ಅವರಿಗೆ ನಿನ್ನೆ ರಾತ್ರಿ ಏಕಏಕಿ ಎದೆ ನೋವು ಕಾಣಿಸಿಕೊಂಡಿದೆ. 

ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಮೃತ ದೇಹ ಇರಿಸಲಾಗಿದೆ. ಕೇರಳದಿಂದ ಕುಟುಂಬಸ್ಥರು ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. 

Kantara's film co-star dies

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close