" alt="ad">

ನಾಳೆ ಜಿಲ್ಲೆಗೆ ಆರೆಂಜ್ ಅಲರ್ಟ್, ನಾಳೆನೂ ರಜಾ ಸಿಗುತ್ತಾ? Orange alert for the district tomorrow

 SUDDILIVE || SHIVAMOGGA

ನಾಳೆ ಜಿಲ್ಲೆಗೆ ಆರೆಂಜ್ ಅಲರ್ಟ್,  ನಾಳೆನೂ ರಜಾ ಸಿಗುತ್ತಾ?Orange alert for the district tomorrow, will holiday get it tomorrow too?

Rain, alert


ಕರ್ನಾಟಕದಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದ್ದು, ಜೂನ್ 27, 2025ರಂದು ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ಈ ಎಚ್ಚರಿಕೆಯಿಂದಾಗಿ ಸ್ಥಳೀಯ ಆಡಳಿತವು ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆ: ಜೂನ್ 27ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಗುಡುಗು-ಮಿಂಚಿನೊಂದಿಗೆ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ. ಕೊಡಗು ಜಿಲ್ಲೆಯಲ್ಲಿ ಅತಿ ಭಾರೀ ಮಳೆಯ ಸಾಧ್ಯತೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತದ ಆತಂಕವೂ ಎದುರಾಗಿದೆ. ಜನರಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ.

ಇನ್ನು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ,ಪ್ರಾಥಮಿಕ ,ಪ್ರೌಢ ಶಾಲೆಗಳಿಗೆ ನಾಳೆ ರಜೆ‌ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ 5 ತಾಲೂಕಿನಲ್ಲಿ ರಜೆ ಘೋಷಣೆ ಮಾಡಲಾಗಿದ್ದು, ಇದರಲ್ಲಿ ಕಳಸ ,ಮೂಡಿಗೆರೆ, ಶೃಂಗೇರಿ ,ಕೊಪ್ಪ,NR ಪುರ ಸೇರಿವೆ. ಇನ್ನು ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಕೃಷಿಕರಿಗೆ ಎಚ್ಚರಿಕೆ: ಭಾರೀ ಮಳೆಯಿಂದಾಗಿ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರಬಹುದು ಎಂದು ರೈತರಿಗೆ ಎಚ್ಚರಿಕೆ ನೀಡಲಾಗಿದೆ. ಕಾವೇರಿ ಮತ್ತು ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಜಲಾಶಯಗಳಿಗೆ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದ್ದು, ಕೆರೆ-ಕಟ್ಟೆಗಳು ತುಂಬುವ ನಿರೀಕ್ಷೆಯಿದೆ. ಆದರೆ, ಕೆಲವು ಕಡೆಗಳಲ್ಲಿ ಬೆಳೆ ಹಾನಿಯ ಆತಂಕವೂ ಇದೆ. ರೈತರಿಗೆ ಬೆಳೆ ರಕ್ಷಣೆಗೆ ಕ್ರಮ ಕೈಗೊಳ್ಳಲು ಸಲಹೆ ನೀಡಲಾಗಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತಗಳು ಎಚ್ಚರಿಕೆ ಕ್ರಮಗಳನ್ನು ತೀವ್ರಗೊಳಿಸಿವೆ. ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದ್ದು, ತಗ್ಗು ಪ್ರದೇಶದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ತಿಳಿಸಲಾಗಿದೆ. ಜೂನ್ 28ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದ ಇರಬೇಕೆಂದು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಸೂಚಿಸಿದೆ.

ಆದರೆ ಈ ಕುರಿತು ಹೊಸನಗರ ತಹಶೀಲ್ದಾರ್ ರಶ್ಮಿ ಸ್ಪಷ್ಟಪಡಿಸಿದ್ದು, ಸಧ್ಯಕ್ಕೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು, ಆಯಾ ತಾಲೂಕಿನ ತಹಶೀಲ್ದಾರ್ ಅವರಿಗೆ ಪರಿಸ್ಥಿತಿ ಅವಲೋಕಿಸಿ ರಜೆಘೋಷಿಸಲು ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. 

Orange alert for the district tomorrow

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close