ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಸಾವು-Photographer dies in road accident

SUDDILIVE || SHIVAMOGGA

ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಸಾವು-Photographer dies in road accident

Photographer, dies


ತಾಲೂಕಿನ ಪಿಳ್ಳಂಗೆರೆ ಸಮೀಪ ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಭದ್ರಾವತಿ ತಾಲೂಕಿನ ಹನುಮಂತಪುರದ ಚೇತನ್ (೩೫) ಮೃತ ಬೈಕ್ ಸವಾರ. ಛಾಯಾಗ್ರಹಕನಾಗಿದ್ದ ಚೇತನ್ ಶಿವಮೊಗ್ಗದಲ್ಲಿ ಕಾರ್ಯಕ್ರಮ ಮುಗಿಸಿ ಮನೆಗೆ ಹೋಗುವಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚೇತನ್ ಮೃತಪಟ್ಟಿದ್ದಾರೆ. ಮೃತದೇಹವನ್ನು ಮೆಗ್ಗಾನ್ ಶವಗಾರಕ್ಕೆ ತಂದು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Photographer dies in road accident

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close