ತೀರ್ಥಹಳ್ಳಿಯ ಹೊಸ ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ - ಪೊಲೀಸರಿಂದ ಖಡಕ್ ಎಚ್ಚರಿಕೆ..! Reels go wild on the new Tunga Bridge

SUDDILIVE || THIRTHAHALLI

ತೀರ್ಥಹಳ್ಳಿಯ ಹೊಸ ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ - ಪೊಲೀಸರಿಂದ ಖಡಕ್ ಎಚ್ಚರಿಕೆ..!Reels go wild on the new Tunga Bridge in Thirthahalli - a stern warning from the police..!

Reels, bridge

ತುಂಗಾ ನದಿಗೆ ಪರ್ಯಾಯವಾಗಿ ಅಡ್ಡಲಾಗಿ ಕಟ್ಟಿರುವ ಹೊಸ ಸೇತುವೆ ಮೇಲೆ ವಾಹನ ಓಡಾಡುವ ಸಂದರ್ಭದಲ್ಲಿ ಯುವಕರು ಹುಚ್ಚಾಟ ಮೆರೆದು ರೀಲ್ಸ್ ಮಾಡಿದ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದ ಹಿನ್ನಲೆಯಲ್ಲಿ  ತೀರ್ಥಹಳ್ಳಿಯ ಹೊಸ ತುಂಗಾ ಸೇತುವೆ ಮೇಲೆ ಯುವಕರ ಹುಚ್ಚಾಟ - ವಾಹನ ಸವಾರರ ಪರದಾಟ..!ಎಂಬ ಶೀರ್ಷಿಕೆ ಅಡಿಯಲ್ಲಿ ವರದಿ ಮಾಡಲಾಗಿತ್ತು.

ಸುದ್ದಿಲೈವ್ ವರದಿ ಬೆನ್ನಲ್ಲೇ ರೀಲ್ಸ್ ಮಾಡಿದ ಯುವಕನನ್ನು ತೀರ್ಥಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸುಷ್ಮಾ ರವರು ಕರೆದು ವಿಚಾರಿಸಿ ಎಚ್ಚರಿಕೆ ನೀಡಿದ್ದಾರೆ. ರೀಲ್ಸ್ ಮಾಡಿದ ಯುವಕನ ಮೇಲೆ ಸಣ್ಣದೊಂದು ಕೇಸ್ ಸಹ ದಾಖಲು ಮಾಡಿ ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಹುಚ್ಚಾಟ ಮಾಡಬಾರದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇನ್ನು ಯಾವುದೇ ವ್ಯಕ್ತಿಯಾಗಲಿ ಸಾರ್ವಜನಿಕ ಸ್ಥಳಗಳಲ್ಲಿ ರೀಲ್ಸ್ ಮಾಡುವುದು, ಸಾರ್ವಜನಿಕ ಆಸ್ತಿ ಪಾಸ್ತಿ ಹಾಳು ಮಾಡುವುದು, ಅಥವಾ ಹೊಸ ಸೇತುವೆ ಮೇಲೆ ಅಸಭ್ಯ ವರ್ತನೆ ಮಾಡುವುದು ಕಂಡು ಬಂದಲ್ಲಿ ಕೇಸ್ ದಾಖಲು ಮಾಡಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

Reels go wild on the new Tunga Bridge

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close