" alt="ad">

ಕೋಚಿಂಗ್ ಸೆಂಟರ್‌ಗಳ ನೋಂದಣಿ ಕಡ್ಡಾಯ-Registration of coaching center is compulsory

SUDDILIVE || SHIVAMOGGA

ಕೋಚಿಂಗ್ ಸೆಂಟರ್‌ಗಳ ನೋಂದಣಿ ಕಡ್ಡಾಯ-Registration of coaching center is compulsory

Clarical, staff



ಕರ್ನಾಟಕ ಶಿಕ್ಷಣ ಕಾಯ್ದೆ 1983 ಅನುಚ್ಛೆದ 35ರ ಪ್ರಕಾರ ಹಾಗೂ ಕರ್ನಾಟಕ ಟ್ಯುಟೋರಿಯಲ್ ಇನ್ಸ್ಟಿಟ್ಯೂಷನ್ಸ್ ನಿಯಮಗಳು 2001 ಈ ನಿಯಮವು ಸರ್ಕಾರದ ಅಧಿಸೂಚನೆ ಇಡಿ 43 ವಿವಧ 2000, ದಿ: 05/03/2002 ರಿಂದ ಜಾರಿಗೆ ಬಂದಿದ್ದು, ಈ ನಿಯಮಗಳ ಅಡಿಯಲ್ಲಿ ಪದವಿ ಪೂರ್ವ ಶಿಕ್ಷಣಕ್ಕೆಸಂಬಂಧಿಸಿದ ಕೋಚಿಂಗ್ ಸೆಂಟರ್/ ಸಂಸ್ಥೆಗಳನ್ನು ನಡೆಸಲು ಉದ್ದೇಶಿಸಿದ ಹಾಗೂ ಈಗಾಗಲೇ ನಡೆಸುತ್ತಿರುವ ಕೋಚಿಂಗ್ ಸೆಂಟರ್/ಸಂಸ್ಥೆಗಳನ್ನು ಕಡ್ಡಾಯವಾಗಿ ನೋಂದಾಯಿಸಬೇಕಾಗಿದ್ದು, ಮತ್ತು ಪ್ರತಿ ವರ್ಷ ನವೀಕರಿಸಿಕೊಳ್ಳಬೇಕು. ಅನಧಿಕೃತವಾಗಿ ಕೋಚಿಂಗ್ ಸೆಂಟರ್/ಸಂಸ್ಥೆಗಳನ್ನು ನಡೆಸುತ್ತಿರುವುದು ಕಂಡುಬಂದಲ್ಲಿ ಕಾನೂನು ರೀತ್ಯಾ ಕ್ರಮಗಳನ್ನು ಜರುಗಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

 ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇವರನ್ನು ಸಂಪರ್ಕಿಸುವುದು. 

Registration of coaching center is compulsory

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close