SUDDILIVE || SHIVAMOGGA
ಬೆಳ್ಳಂಬೆಳಿಗ್ಗೆ ಸಂಚಾರಿ ಪೊಲೀಸರಿಂದ ಅರಿವು ಜಾಗೃತಿ-ಕುಡಿದು ಬಂದವರಿಗೂ ಬಿತ್ತು ಫೈನ್-Traffic police raise awareness in the early hours of the morning - cases registered
ಶಾಲಾ ಮಕ್ಕಳಸುರಕ್ಷತೆಯ ದೃಷ್ಠಿಯಿಂದ ಇಂದು ಬೆಳಿಗ್ಗೆ ನಗರ ಸಂಚಾರಿ ಪೊಲೀಸರು ವಾಹನ ಸವಾರರಿಗೆ ಜಾಗೃತಿ ಮೂಡಿಸಿದ್ದಾರೆ. ಡ್ರಿಂಕ್ ಅಂಡ್ ಡ್ರೈವ್, ಹೆಚ್ಚಿನ ಮಕ್ಕಳನ್ನ ಕರೆದುಕೊಂಡು ಹೋಗುವ ಪ್ರಕರಣ, ಹಾಗೂ ಎಫ್ ಸಿ ಆಗದ ಪ್ರಕರಣಗಳು ಬೆಳಕಿಗೆ ಬಂದಿದೆ.
ಪೂರ್ವ ಮತ್ತು ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಶಿವಮೊಗ್ಗ ನಗರದದಾದ್ಯಂತ ವಿವಿಧ ಸ್ಥಳಗಳಲ್ಲಿ ಹಾಗೂ ಪ್ರಮುಖ ವೃತ್ತಗಳಲ್ಲಿ ಶಾಲೆಗಳಿಗೆ ಮಕ್ಕಳನ್ನು ಕರೆದುಕೊಂಡು ಹೋಗುವ ಶಾಲಾ ಕಾಲೇಜು ವಾಹನಗಳನ್ನು ತಪಾಸಣೆ ಮಾಡಿದ್ದಾರೆ.
ನಿಯಮ ಉಲ್ಲಂಘನೆ ಮಾಡಿದ ವಾಹನ ಚಾಲಕರ ವಿರುದ್ಧ 01) CARRYING EXCESS SCHOOL CHILDREN -17 ಪ್ರಕರಣಗಳು, 02) DRUNK AND DRIVE-04 ಪ್ರಕರಣಗಳು ಮತ್ತು 03) FITNESS EXPIRED (FC)-03 ಪ್ರಕರಣಗಳನ್ನು ದಾಖಲಿಸಿ ಕೊಳ್ಳಲಾಗಿದೆ ಹಾಗೂ ವಾಹನ ಚಾಲಕರಿಗೆ ವಾಹನದವಿಮೆ, ಎಮಿಷನ್ ರಿಪೋರ್ಟ್ ಹಾಗೂ ಫಿಟ್ನೆಸ್ ಸರ್ಟಿಫಿಕೇಟ್ ಅನ್ನು ಚಾಲ್ತಿಯಲ್ಲಿ ಇರುವಂತೆ ನೋಡಿಕೊಳ್ಳಲು ಸೂಚನೆಗಳನ್ನು ನೀಡಲಾಗಿದೆ. ಕಡ್ಡಾಯವಾಗಿ ಸಂಚಾರ ನಿಯಮಗಳ ಪಾಲಿಸುವಂತೆ ಸಹ ಪೊಲೀಸರು ಅರಿವು ಮೂಡಿಸಿದ್ದಾರೆ.
ಪಿಎಸ್ಐ ಭಾರತಿ ಹಾಗೂ ಇತರೆ ಸಿಬ್ಬಂದಿಗಳ ನೇತೃತ್ವದಲ್ಲಿ ಆಲ್ಕೊಳ ವೃತ್ತದಲ್ಲಿ 100 ಕ್ಕೂ ಹೆಚ್ಚು ಶಾಲಾ ವಾಹನಗಳಿಗೆ ಜಾಗೃತಿ ಮೂಡಿಸಿದ್ದಾರೆ.
Traffic police raise awareness