ರಸ್ತೆ ಅಪಘಾತದಲ್ಲಿ ಕಾಡುಕೋಣ ಸಾವು- ದೂರು ದಾಖಲು-Wild buffalo dies in road accident

 SUDDILIVE || THIRTHAHALLI

ರಸ್ತೆ ಅಪಘಾತದಲ್ಲಿ ಕಾಡುಕೋಣ ಸಾವು- ದೂರು ದಾಖಲು-Wild buffalo dies in road accident - complaint filed

WildBuffalo, dies


ಅಪಘಾತದಲ್ಲಿ 15 ವರ್ಷದ ಗಂಡು ಕಾಡುಕೋಣ ಮೃತಪಟ್ಟ ಘಟನೆ ಶುಕ್ರವಾರ ರಾಮಕೃಷ್ಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್. ಪಾಲ್ ಮಜರೆ ಗ್ರಾಮದಲ್ಲಿ ನಡೆದಿದೆ.

ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ವಾಹನವೊಂದು ರಸ್ತೆದಾಟುತ್ತಿದ್ದ ಕಾಡುಕೋಣಕ್ಕೆ ಡಿಕ್ಕಿ ಹೊಡೆದಿತ್ತು. ತಲೆ, ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ. ಇದನ್ನು ಪ್ರತ್ಯಕ್ಷದರ್ಶಿಗಳು ಗಮನಿಸಿ ವಿಡಿಯೋ ಚಿತ್ರೀಕರಿಸಿದ್ದಾರೆ. ಜೊತೆಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಕಾಡುಕೋಣಕ್ಕೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ಮೇಗರವಳ್ಳಿ ವಲಯಾರಣ್ಯಾಧಿಕಾರಿ ಕಚೇರಿಗೆ ಸ್ಥಳಾಂತರಿಸಿದ್ದಾರೆ. 



ಅಲ್ಲಿ ಕಾಡುಕೋಣಕ್ಕೆ ಚಿಕಿತ್ಸೆ ನೀಡಿದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಅರಣ್ಯ ಇಲಾಖೆ ಎಫ್‌ಐಆರ್‌ ದಾಖಲಿಸಿ ಅಪಘಾತ ಮಾಡಿದ ವಾಹನಕ್ಕಾಗಿ ಶೋಧಾಚರಣೆ ನಡೆಸಿದ್ದಾರೆ. ಮೃತ ಕಾಡುಕೋಣವನ್ನು ನ್ಯಾಯಾಲಯದ ಅನುಮತಿ ಮೇರೆಗೆ ಸುಟ್ಟುಹಾಕಲಾಗಿದೆ.

Wild buffalo dies in road accident

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close