SUDDILIVE || SHIVAMOGGA
ಅಂತರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ದಿನ-International Day against Drug Abuse and Illicit Trafficking
ಅಂತರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಈ ದಿನ ಬೆಳಗ್ಗೆ ಮಾದಕ ದ್ರವ್ಯ ವಿರೋದಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದ ಭಾಗವಾಗಿ ಶಿವಮೊಗ್ಗ ನಗರದ ಅಶೊಕ ವೃತ್ತದಲ್ಲಿ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು
ನಂತರ ಅಶೊಕ ವೃತ್ತದಿಂದ ಸುವರ್ಣ ಸಾಂಸ್ಕೃತಿಕ ಭವನದವರೆಗೆ ಜಾಗೃತಿ ಅರಿವು ಜಾಥಾವನ್ನು ಹಮ್ಮಿಕೊಂಡಿದ್ದು, 500 ಕ್ಕೂ ಹೆಚ್ಚು ಶಾಲಾ ಕಾಲೇಜು ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಮತ್ತು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳು ಭಾಗವಹಿಸಿದ್ದರು
ನಂತರ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಸಭಾ ಕಾರ್ಯಕ್ರಮವನ್ನು ನಡೆಸಿದ್ದು, ಜಿಲ್ಲಾಧಿಕಾರಿಗಳು ಪೊಲೀಸ್ ಅಧೀಕ್ಷಕರು, ಮಾನ್ಯ ನ್ಯಾಯಾಧೀಶರು ಡಿಎಲ್ಎಸ್ಎ ಶಿವಮೊಗ್ಗ ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಮತ್ತು ಮಾದ್ಯಮ ಮಿತ್ರರು ಭಾಗವಹಿಸಿದ್ದರು.
ಅಶೋಕ ವೃತ್ತದಲ್ಲಿ ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಕಾರ್ಯಪ್ಪ, ಡಿವೈಎಸ್ಪಿ ಸಂಜೀವ್ ಕುಮಾರ್, ಕೃಷ್ಣಮೂರ್ತಿ ಹಾಗೂ ಇತರರು ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
International Day against Drug Abuse