MrJazsohanisharma
ad

ಕಾಂಗ್ರೆಸ್ ನವರಿಗೆ ಸರ್ಕಾರ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಜಿಲ್ಲಾ ಬಿಜೆಪಿ ಅಧ್ಯಕ್ಷರ ಆಗ್ರಹ-resign and go home, demands district BJP president

 SUDDILIVE || SHIVAMOGGA

ಕಾಂಗ್ರೆಸ್ ನವರಿಗೆ ಸರ್ಕಾರ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಜಿಲ್ಲಾ ಬಿಜೆಪಿ ಅಧ್ಯಕ್ಷರ ಆಗ್ರಹ- If Congress is unable to run the government, then resign and go home, demands district BJP president

Bjp, demands


ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರ ತಾಂಡವಾಡುತ್ತಿದ್ದು ದಿನದಿಂದ ದಿನಕ್ಕೆ ರಾಜ್ಯದ ಜನತೆ ಭ್ರಷ್ಟಾಚಾರದಿಂದ ಬೇಸತ್ತಿದ್ದು ಪರದಾಡುವ ಉಂಟಾಗಿದೆ ಕಾಂಗ್ರೆಸ್ ಸರ್ಕಾರಕ್ಕೆ ಸರ್ಕಾರ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಜಗದೀಶ್ ಎನ್ ಕೆ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಂದಾಗಿನಿಂದ ಬಹುತೇಕಾಯಿ ಇಲಾಖೆಗಳಲ್ಲಿ ಭ್ರಷ್ಟಾಚಾರ ತಂಡವಾಡುತ್ತಿದೆ ಗ್ಯಾರಂಟಿ ಗಾಗಿಯೇ ಇಲಾಕವಾರು ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಮಂತ್ರಿಗಳು ಇಳಿದಿರುವವಂತೆ ಭಾಸವಾಗುತ್ತಿದೆ ಒಂದು ಹಂತದಲ್ಲಿ ಎಲ್ಲಾ ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ದುಡ್ಡನ್ನು ಲೂಟಿ ಮಾಡುತ್ತಿರುವ ಸರ್ಕಾರ ಶಾಸಕರುಗಳ ಕ್ಷೇತ್ರದ ಅಭಿವೃದ್ಧಿಗೆ ಬಿಡಿ ಕಾಸು ಅನುದಾನ ನೀಡುತ್ತಿಲ್ಲ.

ಈ ವಿಷಯವನ್ನು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರುಗಳೇ ಹೇಳುತ್ತಿರುವುದು ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾಗಿದೆ ಇನ್ನು ಕೆಲವರು ನಮ್ಮ ಕ್ಷೇತ್ರಕ್ಕೆ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ ಎಂದು ಬಹಿರಂಗವಾಗಿ ಮಾಧ್ಯಮದ ಮುಂದೆ ಸಾರ್ವಜನಿಕವಾಗಿ ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವ ಮುಖಾಂತರ ಆಡಳಿತ ಪಕ್ಷದ ಶಾಸಕರುಗಳೇ ಸರ್ಕಾರದ ವೈಫಲ್ಯವನ್ನು ಎತ್ತಿ ಹಿಡಿಯುತ್ತಿದ್ದಾರೆ ಎಂದು ಜಗದೀಶ್ ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಬೇಜವಾಬ್ದಾರಿ ತನದಿಂದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಇದಕ್ಕೆ ಸಾಲದಂತೆ ಮಾನ್ಯ ಗೃಹ ಸಚಿವರು ನಮ್ಮ ಹತ್ತಿರ ಹಣವೆಲ್ಲ ಮುಖ್ಯಮಂತ್ರಿಗಳ ಹತ್ತಿರವು ಹಣವಿಲ್ಲ ಆದರೂ ಕೂಡ ಗ್ಯಾರಂಟಿ ಯೋಜನೆಗಳಗೆ ಹಣವನ್ನು ಒದಗಿಸುತ್ತಿದ್ದೇವೆ ಅಂದರೆ ರಾಜ್ಯದ ಅಭಿವೃದ್ಧಿಗೆ ಸರ್ಕಾರದ ಬಳಿ ಹಣವಿಲ್ಲವೆಂಬುದನ್ನು ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ.

ಗ್ಯಾರೆಂಟಿ ಯೋಜನೆಗಳಿಗೆ ಹಣ ಭರ್ತಿ ಮಾಡಲು ಸರ್ಕಾರ ಎಲ್ಲಾ ಇಲಾಖೆಗಳಿಂದ ಲೂಟಿ ಹೊಡೆಯುವುದನ್ನು ಸ್ವತಃ ಗ್ರಹ ಮಂತ್ರಿಗಳೇ ಒಪ್ಪಿಕೊಂಡಂತಾಗಿದೆ ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಸರ್ಕಾರ ನಡೆಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗುವಂತೆ ಜಗದೀಶ್ ಆಗ್ರಹಿಸಿದ್ದಾರೆ.

resign and go home, demands district BJP president

Girl in a jacket

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close