SUDDILIVE || SHIVAMOGGA
ಮೂರು ದಿನಗಳವರೆಗೆ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ-ASHA workers to hold three-day dharna
ಬಹದಿನಗಳ ಬೇಡಿಕೆ ಈಡೇರಿಸುವಂತೆ ಆಗಸ್ಟ್ 12,13 ಹಾಗೂ 14 ರವರೆಗೆ ರಾಜ್ಯವ್ಯಾಪಿ ಜಿಲ್ಲಾ ಮಟ್ಟದ ಆಶಾ ಕಾರ್ಯಕರ್ತೆಯರ ಅಹೋರಾತ್ರಿಪ್ರತಿಭಟನೆ ಧರಣಿ ನಡೆಸುವುದಾಗಿ ಎಐಯುಟಿಯುಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಕರೆ ನೀಡಿದೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಆಶಾಕಾರ್ಯಕರ್ತೆ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಮಾತನಾಡಿ, 10 ಸಾವಿರ ಗೌರವಧನ ಕೊಡುವಂತೆ ಗ್ಯಾರೆಂಟಿಯಾಗಿ ನೀಡಬೇಕು. ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ 1000 ರೂ. ಪ್ರೋತ್ಸಹಧನ ಹೆಚ್ಚಳ ಮಾಡಿದಂತೆ ಆಶಾ ಕಾರ್ಯಕರ್ತೆಯರಿಗೂ ನೀಡಬೇಕು.
ಜನಗಣತಿಯಲ್ಲಿ ಆಶಾಕಾರ್ಯಕರ್ತೆಯರನ್ನ ಕೈಬಿಡಬೇಕು, ಅವಿಜ್ಞಾನಿಕ ಆಶಾ ಕಾರ್ಯಕರ್ತೆಯರ ಕಾರ್ಯ ನಿರ್ವಹಣಾ ಮೌಲ್ಯಮಾಪನ ಕೈಬಿಡಬೇಕು, ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು. ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಹಿಡಿಘಂಟು ನೀಡಬೇಕು. ನಗರ ಆಶಾಗಳಿಗೆ 2018 ರಿಂದ ಗೌರವ ಧನ ಹೆಚ್ಚಿಸಬೇಕು. 2025 ಜೂನ್ ಜುಲೈನಲ್ಲಿ ಕೇಂದ್ರರ ಸರ್ಕಾರ ಹೆಚ್ಚಿಸಿದ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಈ ಧರಣಿ ನಡೆಯುತ್ತಿದೆ ಎಂದರು.
ಎಲ್ಲಾ ಜಿಲ್ಲೆಗಳಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ. ಈ ಅಹೋರಾತ್ರಿ ಧರಣಿ ನಡೆಸುವ ಬಗ್ಗೆ ಜಾಗ ನಿರ್ಧರಿಸಬೇಕಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಆಶಾ ಸಂಘದ ಜಿಲ್ಲಾ ಅಧ್ಯಕ್ಷೆ ರಾಜೇಶ್ವರಿ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಚಂದ್ರಕಲಾ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ASHA workers to hold three-day dharna