SUDDILIVE ||SHIVAMOGGA
ಸಚಿವರ ಹೇಳಿಕೆ ತಿರುಚಿದ ಪ್ರಕರಣ, ಮತ್ತೊಂದು ಮನವಿ ಸಲ್ಲಿಕೆ-Another appeal filed in case of distortion of minister's statement
ಉಸ್ತುವರಿ ಸಚಿವರಾದ ಮಧು ಬಂಗಾರಪ್ಪನವರ ಹೇಳಿಕೆಯನ್ನು ತಿರುಚಿದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಇಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗ ಎಸ್ಪಿ ಮಿಥುನ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದೆ
ನಿನ್ನೆ ಮಧು ಬಂಗಾರಪ್ಪನವರ ಅಭಿಮಾನಿ ಬಳಗ ಮನವಿ ನೀಡಿದ ಬೆನ್ನಲ್ಲೇ ಮತ್ತೊಂದು ಮನವಿಯನ್ನು ಸಲ್ಲಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆ ಗೆ ಭೇಟಿ ನೀಡಿದ ಮಧು ಬಂಗಾರಪ್ಪನವರು ಮಾಧ್ಯಮಕ್ಕೆ ಹೇಳಿಕೆ ನೀಡುವಾಗ ಸಿಗಂದೂರು ಸೇತುವೆ ವಿಷಯವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರ ಹೇಳಿಕೆಯನ್ನು ಬಿಜೆಪಿಯ ಸೋಶಿಯಲ್ ಮೀಡಿಯಾ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ಅದನ್ನು ತಿರುಚಿ ವೈರಲ್ ಮಾಡಲು ಯತ್ನಿಸಿದ್ದಾರೆ ಎಂದು ಹಿಂದುಳಿದ ವರ್ಗಗಳ ವಿಭಾಗ ಮನವಿಯಲ್ಲಿ ದೂರಿದೆ.
ಸಿಗಂದೂರು ದೇವಸ್ಥಾನವನ್ನು ಹೇಗೆ ಹಾಳು ಮಾಡಬೇಕೆಂದು ಒಂದು ತಿಂಗಳ ಒಳಗೆ ನಿಮಗೆ ಡೀಟೇಲ್ ಹೇಳುವೆ ಎಂಬ 19 ಸೆಕೆಂಡಿನ ವಿಡಿಯೋವನ್ನು ಮಾಡಿ ಅದರ ಕೆಳಗಡೆ ಅಜ್ಞಾನಿ ವಿದ್ಯಾ ಮಂತ್ರಿಗಳೇ ಸಿಗಂದೂರು ಚೌಡೇಶ್ವರಿ ಮಾತೆಯ ಮಂದಿರ ಹಾಳು ಮಾಡ್ತೀವಿ ಎಂದ ನಾಲಿಗೆಗೆ ತಾಯಿ ಬರೆ ಹಾಕುವುದು ನಿಶ್ಚಿತ ಎಂದು ದೇವರ ಚಿತ್ರದೊಂದಿಗೆ ವಿಡಿಯೋ ವೈರಲ್ ಮಾಡಲಾಗಿದೆ.
ಈ ರೀತಿಯ ಹೇಳಿಕೆಯನ್ನು ತಿರುಚಿ ಬಿಜೆಪಿ ಕಾರ್ಯಕರ್ತರು ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋವನ್ನು ವೈರಲ್ ಮಾಡುತ್ತಿದ್ದಾರೆ. ಮಂತ್ರಿಗಳನ್ನು ಅಗೌರವಿಸುವ. ಸಚಿವರಿಂದ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹಾಗೆ ಬಿಂಬಿಸುವ ಮೂಲಕ ಸಾರ್ವಜನಿಕರಲ್ಲಿ ತಪ್ಪು ಭಾವನೆ ಮೂಡುವಂತೆ ಮಾಡುತ್ತಿರುವ ಬಿಜೆಪಿಗರ ಹುನ್ನಾರದ ವಿರುದ್ಧ ಕಾನೂನು ಕ್ರಮಜರುಗಿಸುವಂತೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
Another appeal filed in case of distortion of minister's statement