ad

ಹಲವು ಬೇಡಿಕೆಯಿಟ್ಟುಕೊಂಡು ಸಿಐಟಿಯು ಪ್ರತಿಭಟನೆ -CITU protests with many demands

SUDDILIVE || SHIVAMOGGA

ಹಲವು ಬೇಡಿಕೆಯಿಟ್ಟುಕೊಂಡು ಸಿಐಟಿಯು ಪ್ರತಿಭಟನೆ -CITU protests with many demands

CITU, protest

ಕೇಂದ್ರ ಸರ್ಕಾರದ “ಕಾರ್ಮಿಕ, ರೈತ ವಿರೋಧಿ ಮತ್ತು ಕಾರ್ಪೋರೆಟ್ ಪರವಾದ ನೀತಿಗಳನ್ನು ವಿರೋಧಿಸಿ ೧೦ ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟ  ಭಾರತ್ ಬಂದ್‌ಗೆ ಕರೆ ನೀಡಿತ್ತು. 

ದೇಶಾದ್ಯಂತ ೨೫ ಕೋಟಿಗೂ ಹೆಚ್ಚು ಕಾರ್ಮಿಕರು ಇಂದು ದೇಶಾದ್ಯಂತ ಮುಷ್ಕರಕ್ಕೆ ಇಳಿದಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತ್ ಬಂದ್‌ಗೆ ಕರೆ ನೀಡಲಾಗಿತ್ತು. ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರ ಅಥವಾ ’ಭಾರತ್ ಬಂದ್’ನಲ್ಲಿ ಕಾರ್ಮಿಕರ ಸಂಘಟನೆಗಳು ಭಾಗಿಯಾಗಿವೆ.

ಶಿವಮೊಗ್ಗದಲ್ಲಿ ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಪ್ರತಿಭಟನಾ ಮೆರವಣಿಗೆ ನಡೆದಿತ್ತು. 

ಈ ವೇಳೆ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್ ಆರ್ ಬಸವರಾಜಪ್ಪ ಮೇಲಿಂದ ಮೇಲೆ ಬಂಡವಾಳ ಹೂಡಿಕೆ ಸಮಾವೇಶಗಳನ್ನು ಏರ್ಪಡಿಸುತ್ತಿರುವುದು ಕೇವಲ ಕೃಷಿ ಭೂಮಿ ಸಬಲಿಕೆಯ ದುರುದ್ದೇಶಕ್ಕಾಗಿ ಮಾತ್ರ ಹಾಗಾಗಿ ಕೆಐಡಿಬಿಯಲ್ಲಿ ವರ್ಷದಲ್ಲಿರುವ ಲಕ್ಷಾಂತರ ಎಕರೆ ಭೂಮಿಯನ್ನು ಸಮರ್ಥವಾಗಿ ಬಳಸದೆ ಮತ್ತೆ ಮತ್ತೆ ಹೊಸ ಹೊಸ ಭೂಮಿ ಸ್ವಾಧೀನವನ್ನು ಮಾಡುತ್ತಿರುವುದು ರಿಯಲ್ ಎಸ್ಟೇಟ್ ಹಿತಾಸಕ್ತಿ ರಕ್ಷಣೆಗಾಗಿ ಆಗಿದೆ. 

ಕೃಷಿ ಭೂಮಿಯನ್ನು ಬಹು ರಾಷ್ಟ್ರೀಯ ಕಂಪನಿಗಳ ಪರವಾಗಿ ದುರ್ಬಲಗೊಳಿಸಿ ಖಾಸಗಿ ಮಾರುಕಟ್ಟೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಸ್ಮಾರ್ಟ್ ಮೀಟರ್ ಅಳವಡಿಕೆ ಮೂಲಕ ವಿದ್ಯುತ್ ಖಾಸಗೀಕರಣಕ್ಕೆ ಬೆಂಬಲ ನೀಡಲಾಗುತ್ತಿದೆ ಕೃಷಿ ಪಂಸೆಟ್ಟು ಗಳಿಗೂ ಪ್ರಿಪೇಡ್ ಮೀಟರ್ ಅಳವಡಿಕೆಯನ್ನು ಒತ್ತಾಯಿಸಲಾಗುತ್ತಿದೆ. ಕಾರ್ಮಿಕ ವಿರೋಧಿ ಲೇಬರ್ ಕೋಡ್ಗಳ ಜಾರಿಗೆ  ಕ್ರಮ ವಹಿಸುತ್ತಿದ್ದು ಯಾವುದೇ ಓಟಿ ಸೌಲಭ್ಯ ಇಲ್ಲದೆ ದಿನಕ್ಕೆ 12 ಗಂಟೆ ದುಡಿಸಿಕೊಳ್ಳಲು ಕಾರ್ಖಾನೆಗಳಿಗೆ ಅನುಮತಿ ನೀಡಲಾಗುತ್ತಿದೆ.

 ಶಿಕ್ಷಣ ಆರೋಗ್ಯ ಸೇರಿದಂತೆ ಪ್ರತಿಯೊಂದು ನಾಗರಿಕ ಸೌಲಭ್ಯಗಳನ್ನು ಖಾಸಗೀಕರಣ ಗೊಳಿಸಲಾಗುತ್ತಿದೆ ಮತ್ತು ತಿಂಗಳ ಅತಿಥಿ ಶಿಕ್ಷಕರ ನೇಮಕಾತಿಗೂ ಸಾಮಾನ್ಯ  ಪ್ರವೇಶ ಪರೀಕ್ಷೆ ಬರೆಯುವಂತೆ ಆದೇಶ ಹೊರಡಿಸಿದೆ ದಲಿತರು ಮಹಿಳೆಯರು ಮಕ್ಕಳು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ವಿಫಲವಾಗಿದೆ ಅದೇ ಸಂದರ್ಭದಲ್ಲಿ ಪ್ರಜಾಸತ್ತಾತ್ಮಕ ಚಟುವಟಿಕೆಗಳ ಮೇಲೆ ಹೆಚ್ಚು ಹೆಚ್ಚು ನಿರ್ಬಂಧ ಏರಿಕೆ ಮಾಡಿ ಶಾಂತಿಯುತ ಪ್ರತಿಭಟನೆಗಳ ಮೇಲು ಕೂಡ ಕಠಿಣ ಕಾನೂನುಗಳನ್ನು ಅನ್ವಯಿಸಿ ಮುಕದಮೆ ದಾಖಲಿಸಲಾಗುತ್ತಿದೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಈ ನೀತಿಯನ್ನು ವಿರೋಧಿಸಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ನಡೆಸಿ ಸರ್ಕಾರಗಳಿಗೆ ಈ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.

CITU protests with many demands

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close