ad

ರೈತ ವಿರೋಧಿ ಕಾಂಗ್ರೆಸ್ ಸರ್ಕಾರ : ಶಾಸಕ ಡಿ ಎಸ್ ಅರುಣ್-Congress government is anti-farmer

SUDDILIVE || SHIVAMOGGA

ರೈತ ವಿರೋಧಿ ಕಾಂಗ್ರೆಸ್ ಸರ್ಕಾರ : ಶಾಸಕ ಡಿ ಎಸ್ ಅರುಣ್-Congress government is anti-farmer: MLA DS Arun

Congress, DS arun


ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ಕಳೆದ ಎರಡು ವರ್ಷದಿಂದ ರೈತರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬಿಜೆಪಿ ಸರ್ಕಾರ ನೀಡುತ್ತಿದ್ದ “ರೈತ ವಿದ್ಯಾನಿಧಿ" ನಿಲ್ಲಿಸಿದೆ..

52 ಲಕ್ಷ ರೈತರಿಗೆ ಬಿಜೆಪಿ ಸರ್ಕಾರ ನೀಡುತ್ತಿದ್ದ 4000 ರೂಪಾಯಿ ಕಿಸಾನ್ ಸಮ್ಮಾನ್ ನಿಧಿಯನ್ನು ನಿಲ್ಲಿಸಿದೆ. ರೈತರ ಕೃಷಿ ಪಂಪ್‌ಸೆಟ್‌ಗೆ ಟ್ರಾನ್ಸ್‌ಪಾರ್ಮರ್ ಅಳವಡಿಸಲು ಬಿಜೆಪಿ ಸರ್ಕಾರದಲ್ಲಿ 25000 ರೂ ನಿಗಧಿಪಡಿಸಿತ್ತು. ಆದರೆ ಇಂದಿನ ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ಒಂದು ಪಂಪ್‌ಸೆಟ್‌ಗೆ ಟ್ರಾನ್ಸ್ ಪಾರ್ಮರ್ ಅಳವಡಿಸಲು 3 ಲಕ್ಷ ರೂ ನೀಡಬೇಕಾಗಿದೆ..

ಕರ್ನಾಟಕದಲ್ಲಿ ಬಿತ್ತನೆ ಬೀಜದ ಮೇಲಿನ ಬೆಲೆಯನ್ನು ಪ್ರತಿ ಕ್ವಿಂಟಾಲ್‌ಗೆ ಶೇ.20 ರಷ್ಟು ಏರಿಕೆ.. ಬರ ಪರಿಹಾರಕ್ಕೆ ಕೇಂದ್ರ ಸರ್ಕಾರ ನೀಡಿದ 3454 ಕೋಟಿ ರೂ ಅನುದಾನದಲ್ಲಿ ನಯಾಪೈಸೆಯನ್ನು ರಾಜ್ಯದ ರೈತರಿಗೆ ತಲುಪಿಸದೆ ಲೂಟಿ ಹೊಡೆದಿದ್ದಾರೆ.

ಕರ್ನಾಟಕ ರಾಜ್ಯಕ್ಕೆ ಯುರಿಯಾ ರಸಗೊಬ್ಬರವು 6.30 ಲಕ್ಷ ಮೆಟ್ರಿಕ್ ಟನ್ ಅವಶ್ಯಕತೆ ಇದ್ದು, ಕೇಂದ್ರ ಸರ್ಕಾರ 8.73 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಅವಶ್ಯಕತೆಗಿಂತ ಹೆಚ್ಚಿಗೆ ಕರ್ನಾಟಕಕ್ಕೆ ನೀಡಿರುತ್ತದೆ. ಉಳಿದ 2.43 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ರಾಜ್ಯದ ರೈತರಿಗೆ ನೀಡದೆ ಕಾಳಸಂತೆಯಲ್ಲಿ ಕಾಂಗ್ರೆಸ್ ಸರ್ಕಾರ ಮಾರಾಟ ಮಾಡುತ್ತಿದೆಯೇ?

ಕಳೆದ 2 ವರ್ಷಗಳ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 3400ಕ್ಕಿಂತ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭೂ ಸಿರಿ ಯೋಜನೆಯಡಿ ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10000 ರೂ ನೀಡುವ ಪ್ರೋತ್ಸಾಹಧನವನ್ನು ನಿಲ್ಲಿಸಿದ್ದಾರೆ.

ರೈತರಿಗೆ ನೀಡಬೇಕಾದ ಹಾಲಿನ ಪ್ರೋತ್ಸಾಹ ಧನವನ್ನು ಕಾಂಗ್ರೆಸ್ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಹಾವೇರಿ ಮತ್ತು ರಾಣಿಬೆನ್ನೂರಿನಲ್ಲಿ ರಸಗೊಬ್ಬರ ಖರೀದಿಸಲು ಮುಂದಾಗಿದ್ದ ರೈತರಿಗೆ ಪೊಲೀಸರು ಲಾಟಿ ಚಾರ್ಜ್ ಮಾಡಿರುವುದನ್ನು ಬಿಜೆಪಿಯು ತೀವ್ರವಾಗಿ ಖಂಡಿಸುತ್ತದೆ.

ಕರ್ನಾಟಕ ರಾಜ್ಯದಲ್ಲಿ ರಸಗೊಬ್ಬರದ ಅವೈಜ್ಞಾನಿಕವಾಗಿ ದಾಸ್ತಾನು ಶೇಖರಣೆ ಮಾಡಿರುವ ಪರಿಣಾಮವಾಗಿ ಕರ್ನಾಟಕ ಎಲ್ಲ ಜಿಲ್ಲಾದ್ಯಂತ ರಸಗೊಬ್ಬರದ ಅಭಾವ ಉಂಟಾಗಿ ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರದ ಕೃಷಿ ಸಚಿವರು ಮತ್ತು ಇಲಾಖೆ ಸಂಪೂರ್ಣ ನಿಷ್ಕ್ರಿಯರಾಗಿದ್ದಾರೆ. ಎಂದು ತಿಳಿಸಿದರು.

Congress government is anti-farmer

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close