ad

ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಖತರ್ನಾಕ್ ಕಳ್ಳರು- Dangerous thieves steal gold jewellery from house under the pretext of Sintex repair

 SUDDILIVE || SHIVAMOGGA

ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಖತರ್ನಾಕ್ ಕಳ್ಳರು-Dangerous thieves steal gold jewellery from house under the pretext of Sintex repair

Thieves, jewellary


ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಖತರ್ನಾಕ್ ಕಳ್ಳರು ಪರಾರಿಯಾಗಿರುವ ಘಟನೆ ಶಿಕಾರಿಪುರ ತಾಲೂಕಿನ ಕಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಲ್ಲೇನಹಳ್ಳಿ ಗ್ರಾಮದ ಶೀಲಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳತನವಾಗಿದೆ. ಮಾಂಗಲ್ಯ ಸರ ಸೇರಿದಂತೆ 6 ಲಕ್ಷದ ಮೌಲ್ಯದ ಚಿನ್ನಾಭರಣ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಮನೆಯಲ್ಲಿದ್ದ ವೃದ್ದೆಯನ್ನ ನೀರಿನ ಟ್ಯಾಂಕ್ ರಿಪೇರಿ ಬಂದಿದ್ದೇವೆ, ಟ್ಯಾಂಕ್ ತೋರಿಸಿ ಎಂದು ವೃದ್ದೆಯನ್ನ ನಂಬಿಸಿ, ವೃದ್ದೆಯ ದಾರಿ ತಪ್ಪಿಸಿ ಮನೆಯ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣವನ್ನ ಖತರ್ನಾಕ್ ಕಳ್ಳರು ದೋಚಿದ್ದಾರೆ. ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Dangerous thieves steal gold jewellery from house under the pretext of Sintex repair

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close