ad

ಸಿಗಂದೂರು ಸೇತುವೆ ಉದ್ಘಾಟನೆಗೆ ಶೀಘ್ರದಲ್ಲಿಯೇ ದಿನಾಂಕ ಮತ್ತು ಸ್ಥಳ ನಿಗದಿ-ಬಿ.ವೈ.ರಾಘವೇಂದ್ರ- Date and location to be fixed for Sigandur Bridge

 SUDDILIVE || TUMARI

ಸಿಗಂದೂರು ಸೇತುವೆ ಉದ್ಘಾಟನೆಗೆ ಶೀಘ್ರದಲ್ಲಿಯೇ ದಿನಾಂಕ ಮತ್ತು ಸ್ಥಳ ನಿಗದಿ-ಬಿ.ವೈ.ರಾಘವೇಂದ್ರ-Date and location to be fixed for Sigandur Bridge soon-B.Y. Raghavendra

Sigandooru, Bridge


ಮುಳುಗಡೆ ಸಂತ್ರಸ್ತರ ಆರ್ಥಿಕತೆಗೆ ಚೈತನ್ಯ ತುಂಬುವ ಬಹು ನಿರೀಕ್ಷಿತ ಸಿಗಂದೂರು ಸೇತುವೆಯ ಉದ್ಘಾಟನೆಯ ದಿನಾಂಕವನ್ನು ಅಂತಿಮಗೊಳಿಸಲು ಚರ್ಚೆ ನಡೆಯುತ್ತಿದೆ ಎಂದು ಸಂಸದ ಬಿ ವೈ ರಾಘವೇಂದ್ರ ತಿಳಿಸಿದರು.

ಸಾಗರ ತಾಲೂಕಿನ ಸಿಗಂದೂರು ಸೇತುವೆಯನ್ನು ಮಂಗಳವಾರ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಲೆನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಿದೆ. ದೇಶದ ಗಣ್ಯರು ಆಗಮಿಸುವ ಕಾರಣ ಹೆಲಿಕಾಪ್ಟರ್‌ಗಳು ಬರಲು ಪೂರಕ ಹವಾಮಾನ ಅಗತ್ಯವಿದೆ. ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸಿ ಒಂದು ದಿನ ನಿಗದಿಪಡಿಸಬೇಕಿದೆ. ಜುಲೈ 21 ರಿಂದ ಸಂಸತ್ ಅಧಿವೇಶನ ಆರಂಭವಾಗಲಿದೆ. ಅಧಿವೇಶನಕ್ಕೂ ಮುನ್ನ ಅಥವಾ ಅಧಿವೇಶನದ ನಂತರ ಕಾರ್ಯಕ್ರಮ ನಡೆಸುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದರು.

ಉದ್ಘಾಟನೆಯ ವೇದಿಕೆ ಕಾರ್ಯಕ್ರಮಕ್ಕೆ ಎರಡು ಕಡೆಗಳಲ್ಲಿ ಸ್ಥಳ ಗುರುತಿಸಲಾಗಿದೆ. ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸ್ಥಳ ಅಂತಿಮಗೊಳಿಸಲಾಗುವುದು.  

ಸಂಸದ ಬಿ.ವೈ ರಾಘವೇಂದ್ರ-

 -------------------------------

ಗ್ರಾಮ ಪಂಚಾಯತಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಿ ಹೆಚ್ಚಿನ ಅನುದಾನ ತರುವಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಶ್ರಮ ಪ್ರಮುಖವಾದ್ದು. ಇದು ಕೇಬಲ್ ತಂತ್ರಜ್ಞಾನದ ದೇಶದ ಎರಡನೇ ಉದ್ದದ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಸೇತುವೆಯಿಂದಾಗಿ ಮಲೆನಾಡು ಮತ್ತು ಕರಾವಳಿಯ ಸಂಪರ್ಕ ಸಾಧ್ಯವಾಗಲಿದೆ ಈ ಭಾಗದಲ್ಲಿರುವ ಧಾರ್ಮಿಕ ಕ್ಷೇತ್ರಗಳ ಸಂಪರ್ಕಕ್ಕೆ ಇದೊಂದು ರಾಜಮಾರ್ಗವಾಗಲಿದೆ. ಕರೂರು ಬಾರಂಗಿ ಹೋಬಳಿ ಹಾಗೂ ಸಾಗರ ಭಾಗದ ಆರ್ಥಿಕ ಬೆಳವಣಿಗೆಯು ಇದರಿಂದ ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಈ ಸೇತುವೆ ಆಧುನಿಕ ತಂತ್ರಜ್ಞಾನ ವ್ಯವಸ್ಥೆ ಜೊತೆಗೆ ಗುಣಮಟ್ಟದಿಂದ ಕೂಡಿದೆ 423.15 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣಗೊಂಡಿದೆ. ಶೀಘ್ರವೇ ಸಾರ್ವಜನಿಕರ ಸೇವೆಗೆ ಈ ಸೇತುವೆ ಲೋಕಾರ್ಪಣೆ ಆಗಲಿದೆ. ದ್ವೀಪದ ಸಂತ್ರಸ್ತ ಜನರು ಮತ್ತು ಭಕ್ತರ ಆಶಯದಂತೆ ಸೇತುವೆ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದರು. 


ಸಿಗಂದೂರು ದೇವಿಗೆ ವಿಶೇಷ ಪೂಜೆ

ಸೇತುವೆ ವೀಕ್ಷಣೆಯ ನಂತರ ಸಂಸದರು  ಹಾಗೂ ಇತರ ಗಣ್ಯರು ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು ಈ ವೇಳೆ ದೇವಸ್ಥಾನದ ಕಾರ್ಯದರ್ಶಿ ರವಿಕುಮಾರ್ ಹೆಚ್ಆರ್ ಉಪಸ್ಥಿತರಿದ್ದರು.

ಸೇತುವೆ ವೀಕ್ಷಣೆಯ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಶಾಸಕ ಆರೋಗ್ಯ ಕೇಂದ್ರ ಮಾಜಿ ಶಾಸಕ ಹರತಾಳು ಹಾಲಪ್ಪ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಜಗದೀಶ್ ಎಮ್ಮೆ ಐಡಿಬಿ ಮಾಜಿ ಅಧ್ಯಕ್ಷ ಗುರುಮೂರ್ತಿ ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾದ ಟಿಡಿ ಮೇಘರಾಜ್ ಮಲ್ಲಿಕಾರ್ಜುನ ಹಾಕ್ರೆ ಮೊದಲಾದವರು ಉಪಸ್ಥಿತರಿದ್ದರು

Date and location to be fixed for Sigandur Bridge   

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close