SUDDILIVE || SHIVAMOGGA
ಖಾಸಗಿ ಆಸ್ಪತ್ರೆಗೆ ಅನುಕೂಲ ಮಾಡಿಕೊಡಬೇಡಿ-ಆರಗ-Don't facilitate private hospitals - Araga
ರಾಜ್ಯ ಸರ್ಕಾರ ಇತ್ತೀಚೆಗೆ ವೈದ್ಯರ ವರ್ಗಾವಣೆ ಆರಂಭಿಸಿದೆ. ಮೊದಲೇ ರಾಜ್ಯದಲ್ಲಿ ತಜ್ಞ ವೈದ್ಯರ ಕೊರತೆ ಇದೆ. ಈ ವೇಳೆ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯ ವೈದ್ಯರ ವರ್ಗಾವಣೆಯ ಬಗ್ಗೆ ತೀರ್ಥಹಳ್ಳಿ ಶಾಸಕ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.
ಕ್ರಿಟಿಕಲ್, ನಾನ್ ಕ್ರಿಟಿಕಲ್ ಎಂದು ಎರಡು ವಿಭಾಗ ಮಾಡಿದ್ದಾರೆ. ಇದರಿಂದಾಗಿ ವೈದ್ಯರು ಕೆಲಸದಿಂದ ವಿಮುಖರಾಗುತ್ತಾರೆ. ತಕ್ಷಣವೇ ಸರ್ಕಾರ ತನ್ನ ನಿರ್ಧಾರ ಮರು ಪರಿಶೀಲಿಸಬೇಕು. ವರ್ಗಾವಣೆ ದಂಧೆಯಿಂದ ಖಾಸಗಿ ಆಸ್ಪತ್ರೆಗೆ ಅನುಕೂಲ ಆಗಲಿದೆ. ರಾಜ್ಯ ಸರ್ಕಾರದ ಸಮೀಕ್ಷೆ ವೈಜ್ಞಾನಿಕವಾಗಿ ನಡೆಯುತ್ತಿಲ್ಲ. ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಈ ರೀತಿ ಮಾಡುತ್ತಿದೆ ಎಂದು ಅವರು ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
Don't facilitate private hospitals - Araga