SUDDILIVE || SHIVAMOGGA
ಮನೆ ಮನೆಗೆ ಪೊಲೀಸ್ ಅಭಿಯಾನಕ್ಕೆ ಚಾಲನೆ-Door-to-door police campaign launched
ಪೊಲೀಸ್ ವ್ಯವಸ್ಥೆಯಲ್ಲಿ ಸಾರ್ವಜನಿಕ ಸಹಭಾಗಿತ್ವವನ್ನು ಹೆಚ್ಚಿಸಿ ಇಲಾಖೆಯನ್ನು ಸಾರ್ವಜನಿಕ ಸ್ನೇಹ ಆಗಿಸಿ ಸಮಾಜಕ್ಕೆ ಉತ್ತಮ ಸಕ್ರಿಯ ಪೊಲೀಸ್ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಇಲಾಖೆಯು ಮಹತ್ವಕಾಂಕ್ಷೆಯ ಯೋಜನೆಯನ್ನು ಜಾರಿಗೆಗೋಳಿಸಿದೆ.
ಸಮುದಾಯವೇ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ದಿಶೆಯಲ್ಲಿ ಸಾರ್ವಜನಿಕರೊಂದಿಗೆ ಪೊಲೀಸ್ ಇಲಾಖೆಯ ಉತ್ತಮ ಹಾಗೂ ಸ್ನೇಹಪರ ಸಂಬಂಧವನ್ನು ಬೆಸೆದು ಸೌಹಾರ್ದತೆಯ ಸಮಾಜವನ್ನು ನಿರ್ಮಿಸಲು ಮನೆ ಮನೆಗೆ ಪೊಲೀಸ್ ಪರಿಕಲ್ಪನೆಯನ್ನು ಜಾರಿಗೆಗೊಳಿಸಿದೆ.
ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಬರುವ ಮನೆಗಳಿಗೆ ಸಾರ್ವಜನಿಕರೊಡನೆ, ಸಂವಾದಿಸಲಿದ್ದಾರೆ. ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಪೊಲೀಸ್ ಇಲಾಖೆಯು ಮನವಿ ಮಾಡಿತ್ತು ಈ ಹಿನ್ನೆಲೆಯಲ್ಲಿ ಈಗಾಗಲೇ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಬರುವ ಮನೆಗಳಿಗೆ ಭೇಟಿ ನೀಡಿ ಅಪರಾಧದ ಕುರಿತು ಚರ್ಚಿಸುತ್ತಿದ್ದಾರೆ.
ಸಾಮಾಜಿಕ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಈಗಾಗಲೇ ಮನೆ ಮನೆಗೆ ಪೊಲೀಸರು ತೆರಳಿ ಸಾರ್ವಜನಿಕರ ಮಾಹಿತಿ ಪಡೆಯುವಂತೆ ಸಿಬ್ಬಂದಿಗಳ ಮತ್ತು ಅಧಿಕಾರಿಗಳ ಸಭೆಯನ್ನು ನಡೆಸಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಮನೆ ಮನೆಗೆ ಪೋಲಿಸ್ ಕಾರ್ಯಕ್ರಮ ಇಂದು ನಗರದ SPM ರಸ್ತೆಯ ಜೈನ್ ಭವನದ ಬಳಿ, ಶಾಮ್ ಪ್ರಸಾದ್ ಮುಖರ್ಜಿ ರಸ್ತೆ ಸಂತೋಷ್ ಬಾಗೋಜಿ,ಸಬ್ ಇನ್ಸ್ಪೆಕ್ಟರ್ ಹಾಗೂ ಆಂತೋನಿ ಎಎಸ್ಐ ಇವರುಗಳು ಬಂದು ಈ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ವಿವರಣೆ ನೀಡಿದರು.
Door-to-door police campaign launched