SUDDILIVE || SHIVAMOGGA
ಎರಡು ತಾಲೂಕಿನ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ-Holiday for Anganwadis and schools in two talukas
ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ಇಂದು (ಜುಲೈ 25, ಶುಕ್ರವಾರ) ರಜೆ ಘೋಷಿಸಲಾಗಿದೆ.
ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಳೆಯೂ ಮಳೆಯ ಸಾಧ್ಯತೆ ಇರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಸಾಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆ ಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ದಿನಾಂಕ 25.07.2025 ರಂದು ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ ಮತ್ತು ಪ್ರಾಥಮಿಕ ಶಾಲೆಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದೆ,ಮುಂದಿನ ರಜಾ ದಿವಸಗಳಲ್ಲಿ ಶಾಲೆಗಳನ್ನು ನಡೆಯಿಸಿ ಪಾಠ ಪ್ರವಚನಗಳನ್ನು ಸರಿದೂಗಿಸಲಾಗುವುದು ಎಂದು ತಹಶೀಲ್ದಾರ್ ಸೂಚಿಸಿದ್ದಾರೆ.
Holiday for Anganwadis and schools in two talukas