SUDDILIVE || SHIVAMOGGA
ಎರಡು ದಿನ ಎರಡು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ-Power outage in two areas for two days
ಜು.26 ಮತ್ತು 27 ರಂದು ನಗರದ ಎರಡು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ನಗರದ ಉಪ ವಿಭಾಗ-2ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಾಹಣೆಯ ಕಾಮಗಾರಿ ಇರುವುದರಿಂದ ಜು.26 ರಂದು ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹಳೇ ಮಂಡ್ಲಿ, ಗಂಧರ್ವ ನಗರ, ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ವಿಜಯವಾಣಿ ಪ್ರೆಸ್ ಹತ್ತಿರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಶ್ರೀನಿವಾಸ ಲೇಔಟ್, ಇಲಿಯಾಜ್ ನಗರ 1ನೇ ಕ್ರಾಸ್‌ನಿಂದ 4ನೇ ಕ್ರಾಸ್ ವರೆಗೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ್ ರೈಸ್ ಮಿಲ್, ಬೆನೆಕೇಶ್ವರ ರೈಸ್ ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪವಿಭಾಗ-2ರ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.27 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ. ಜು.25(ಕರ್ನಾಟಕ ಸರ್ಕಾರ): ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿ ಎಫ್-17 ಅಂಡ್ ಎಂಸಿ ಎಫ್-18 ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿAದ ಜು.27ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯರೆಗೆ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹೊನ್ನವಿಲೆ, ನವುಲೆ ಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಮೆಸ್ಕಾಂ ನೊಂದಿಗೆ ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Power outage in two areas for two days