SUDDILIVE ||SHIVAMOGGA
ಪೌರಕಾರ್ಮಿಕರ ಹೋರಾಟಕ್ಕೆ ಬಿಜೆಪಿ, ರಾಷ್ಟ್ರಭಕ್ತರ ಬಳಗ ಮತ್ತು ಬಿಜೆಪಿ ಬೆಂಬಲ-Rashtra Bhaktara Balaga and BJP support the struggle of the civil servants
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಪೌರಕಾರ್ಮಿಕರ ಪ್ರತಿಭಟನೆಗೆ ಇಂದು ರಾಷ್ಟ್ರಭಕ್ತರ ಬಳಗ ಕೆ ಎಸ್ ಈಶ್ವರಪ್ಪ ಹಾಗೂ ಸಂಸದ ರಾಘವೇಂದ್ರ ಡಿಎಸ್ ಅರುಣ್ ಭೇಟಿ ನೀಡಿ ಬೆಂಬಲ ಸೂಚಿಸಿದ್ದಾರೆ.
ಕೆ ಎಸ್ ಈಶ್ವರಪ್ಪನವರು ಸ್ಥಳದಲ್ಲಿಯೇ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಕರೆ ಮಾಡಿ ಪೌರಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಿದರು. ಈ ವೇಳೆ ಮಾತನಾಡಿದ ಮಾಜಿ ಡಿಸಿಎಂ ಈಶ್ವರಪ್ಪನವರು ಪೌರಕಾರ್ಮಿಕರ ಹೋರಾಟ ನ್ಯಾಯಯುತವಾಗಿದೆ ಸರ್ಕಾರ ಇವರ ಬಗ್ಗೆ ಕಾಳಜಿ ವಹಿಸಬೇಕಿತ್ತು ಎಂದು ಆಗ್ರಹಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಬಂದು ಪೌರಕಾರ್ಮಿಕರನ್ನು ಮಾತನಾಡಿಸುವ ಗೋಜಿಗೆ ಹೋಗದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಮಾಜಿ ಡಿಸಿಎಂ ಪೌರಕಾರ್ಮಿಕರನ್ನು ಕಡೆಗಣಿಸುವುದು ಸರಿಯಲ್ಲ ಎಂದು ತಿಳಿಸಿದರು
ನಂತರ ಬಿಜೆಪಿ ಸಂಸದ ಬಿ ವೈ ರಾಘವೇಂದ್ರ ಡಿಎಸ್ ಅರುಣ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದರು ಸರ್ಕಾರ ಅರೆ ಸರ್ಕಾರ ಎಂದು ಸ್ಥಳೀಯ ಸಂಸ್ಥೆಗಳನ್ನು ಪರಿಗಣಿಸಿದ ಪರಿಣಾಮ ಅವರ ಬೇಡಿಕೆಗೆ ಬೇಡಿಕೆಯಾಗಿ ಉಳಿದಿದೆ ಈ ಬಗ್ಗೆ ಸರ್ಕಾರ ಗಮನಿಸಬೇಕೆಂದು ಆಗ್ರಹಿಸಿದರು ಏಳನೇ ವೇತನದ ಆಯೋಗವನ್ನು ಪೌರಕಾಮ ಕಾರ್ಮಿಕರಿಗೆ ನೀಡುವ ಬಗ್ಗೆ ಸರ್ಕಾರ ಚಿಂತಿಸಬೇಕೆಂದು ಒತ್ತಾಯಿಸಿದರು.
ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೇ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಅಶೋಕ್ ಅವರ ನೇತೃತ್ವದಲ್ಲಿ ಪೌರಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸುವ ಕುರಿತಂತೆ ಬೈರತಿ ಸುರೇಶ್ ರೊಂದಿಗೆ ಮೊಬೈಲ್ ನಲ್ಲಿ ಮಾತನಾಡಿದ್ದು ಸುರೇಶ್ ಅವರು ಕೆಲಸದ ನಿಮಿತ್ತ ದೆಹಲಿಗೆ ತೆರಳಿದ್ದರಿಂದ ಈ ಕುರಿತು ಪರಿಶೀಲನೆ ನಡೆಸುವಂತೆ ಆಗ್ರಹಿಸಿದ್ದಾರೆ ಎಂದು ತಿಳಿಸಿದರು.
ಪೌರ ಕಾರ್ಮಿಕ ಇಲಾಖೆಯ ದೀಪಕ್ ಚೋಳನ್ ಅವರನ್ನು ಸಹ ಭೇಟಿ ಮಾಡಿ ನ್ಯಾಯಯುತ ಬೇಡಿಕೆ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪೌರಕಾರ್ಮಿಕರ ಬೇಡಿಕೆಯನ್ನು ಈಡೇರಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಗುರು ಪೂರ್ಣಿಮಾ ಹಿನ್ನೆಲೆಯಲ್ಲಿ ಪೌರಕಾರ್ಮಿಕರ ಬೇಡಿಕೆ ಈಡೇರುವಂತೆ ಸಂಸದರು ಹರಿಸಿದರು.ಎಂಎಲ್ಸಿ ಡಿಎಸ್ ಅರುಣ್ ಸಹ ಪೌರಕಾರ್ಮಿಕರ ಬೇಡಿಕೆ ಈಡೇರಬೇಕು ಎಂದು ಆಗ್ರಹಿಸಿದರು.
Rashtra Bhaktara Balaga and BJP support the struggle of the civil servants