SUDDILIVE || SHIVAMOGGA
ಬಾಲಕನ ಮೇಲೆ ಬೀದಿ ನಾಯಿ ದಾಳಿ-Stray dog attacks boy
ನಗರದ ಸೋಮಿನಕೊಪ್ಪ ಬಡಾವಣೆ ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನೋರ್ವನ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಜು. 13 ರ ಬೆಳಿಗ್ಗೆ ನಡೆದಿದೆ.
ಮಹಮ್ಮದ್ ತಸ್ಲೀಮ್ ಎಂಬುವರ ಪುತ್ರ, 4 ವರ್ಷ ವಯೋಮಾನದ ಮಹಮ್ಮದ್ ತಮೀಮ್ ಗಾಯಗೊಂಡ ಬಾಲಕ ಎಂದು ಗುರುತಿಸಲಾಗಿದೆ.
ನಾಯಿ ದಾಳಿಯಿಂದ ಬಾಲಕನ ತುಟಿ ಭಾಗ ಬಳಿ ಗಂಭೀರ ಗಾಯವಾಗಿದೆ. ಆತನಿಗೆ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಬಾಲಕನ ಮುಖದ ಮೇಲೆಯೇ ದಾಳಿ ನಾಯಿ ದಾಳಿ ನಡೆಸಿದೆ. ತಕ್ಷಣವೇ ಸುತ್ತಮುತ್ತಲಿನ ನಿವಾಸಿಗಳು ನಾಯಿಯನ್ನು ಓಡಿಸಿ, ಬಾಲಕನ ರಕ್ಷಣೆ ಮಾಡಿದ್ದಾರೆ.
‘ಸೋಮಿಕೊಪ್ಪ ಬಡಾವಣೆಯಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ. ಜಾನುವಾರುಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿವೆ. ಇದೀಗ ಬಾಲಕನೋರ್ವನ ಮೇಲೆ ನಾಯಿಯೊಂದು ದಾಳಿ ನಡೆಸಿ ಗಾಯಗೊಳಿಸಿದೆ. ತಕ್ಷಣವೇ ಪಾಲಿಕೆ ಆಡಳಿತ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕು’ ಎಂದು ಸೋಮಿನಕೊಪ್ಪದ ನಿವಾಸಿ ಮಕ್ಬುಲ್ ಅಹ್ಮದ್ ಅವರು ಆಗ್ರಹಿಸಿದ್ದಾರೆ.