ad

ರಾಗಿಗುಡ್ಡದಲ್ಲಿ ಅನ್ಯಕೋಮಿನದ ನಡೆಯಿತಾ ಈ ಕೃತ್ಯ?Was this act committed by a heathen in Ragigudda

SUDDILIVE || SHIVAMOGGA

ರಾಗಿಗುಡ್ಡದಲ್ಲಿ ಅನ್ಯಕೋಮಿನದ ನಡೆಯಿತಾ ಈ ಕೃತ್ಯ?Was this act committed by a heathen in Ragigudda?

Ragigudda, heathen


ಶಿವಮೊಗ್ಗದ ರಾಗಿಗುಡ್ಡದಲ್ಲಿ ಅನ್ಯಕೋಮಿನ ಯುವಕರ ದುಷ್ಕೃತ್ಯನಡೆದಿದೆ. ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲು ಚರಂಡಿಗೆ ಬಿಸಾಡಿದ ಆರೋಪ ಮಾಡಲಾಗಿದೆ. 

ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಗೊಂದಲದ ವಾತವರಣ ನಿರ್ಮಾಣವಾಗಿದೆ. ಅನ್ಯಕೋಮಿನ ಯುವಕರ ದುಷ್ಕೃತ್ಯಕ್ಕೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 


ಹಿಂದೂ ದೇವರುಗಳಿಗೆ ಅವಮಾನ ಮಾಡಿದ್ದಾರೆ ಎಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ರಾಗಿಗುಡ್ಡ- ಶಾಂತಿನಗರ ವಾರ್ಡ್ ನ ಬಂಗಾರಪ್ಪ ಬಡಾವಣೆಯಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. 

ಸ್ಥಳಕ್ಕೆ ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಶಿವಮೊಗ್ಗ ಸಬ್ ಡಿವಿಜನ್-2 ಡಿವೈಎಸ್ಪಿ ಸಂಜೀವ್ ಕುಮಾರ್ ಭೇಟಿ ನೀಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಐ ಸತ್ಯನಾರಾಯಣ, ಜಯನಗರ ಠಾಣೆ ಪಿಐ ಸಿದ್ದೇಗೌಡ ಭೇಟಿ ನೀಡಿದ್ದಾರೆ.


ಸ್ಥಳೀಯರ ಜೊತೆ ಹಿರಿಯ ಪೊಲೀಸ್ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ. ದೂರು ನೀಡಿ, ತಪ್ಪಿತಸ್ಥರನ್ನ ಬಂಧಿಸುತ್ತೇವೆ ಎಂದು ಪೊಲೀಸ್ ಅಧಿಕಾರಿಗಳ ಭರವಸೆ ನೀಡಿದ್ದಾರೆ.ಬಂಗಾರಪ್ಪ ಬಡಾವಣೆಯಲ್ಲಿ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಪ್ರಯತ್ನಿಸಿದ್ದಾರೆ.ಘಟನಾ ಸ್ಥಳದಲ್ಲಿ ಪೊಲೀಸ್ ಬಿಗಿ-ಭದ್ರತೆಗೊಳಿಸಿದ್ದಾರೆ. 

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಎಸ್ಪಿ ಮಿಥುನ್ ಕುಮಾರ್, ಪ್ರಾಥಮಿಕ ಹಂತದಲ್ಲಿ ವಿಗ್ರಹವನ್ನ‌ ಕೆಳಗೆ ಬೀಳಿಸಲಾಗಿತ್ತು. ಈಗ ಅದನ್ನ ಮೊದಲು ಹೇಗಿತ್ತೋ ಹಾಗೆ ಇರಿಸಲಾಗಿದೆ. ಸಾರ್ವಜನಿಕರ ಬಳಿ ಇಬ್ವರು ಬಂದು ಮಾತನಾಡಿದ ವಿಡಿಯೋವೊಂದಿದೆ. ಪರಿಶೀಲನೆ ನಡೆಸಿ ನಂತರ ಯಾರು ಅದನ್ನ ಮಾಡಿದ್ದಾರೆ. ಉದ್ದೇಶವೇನು ಎಂಬುದು ಬೆಳಕಿಗೆ ಬರಲಿದೆ ಎಂದರು. 

Was this act committed by a foreigner in Ragigudda?

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close