ad

ವಾಣಿ ವಿಲಾಸ ಸಾಗರಕ್ಕೆ ನೀರು : ಕಾಲುವೆ ಪಾತ್ರದ ಜನರು ಎಚ್ಚರಿಕೆಯಿಂದಿರಲು ಸೂಚನೆ- Water release to Vani Vilas Sagar

SUDDILIVE || SHIVAMOGGA

ವಾಣಿ ವಿಲಾಸ ಸಾಗರಕ್ಕೆ ನೀರು : ಕಾಲುವೆ ಪಾತ್ರದ ಜನರು ಎಚ್ಚರಿಕೆಯಿಂದಿರಲು ಸೂಚನೆ- Water release to Vani Vilas Sagar   



ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಅಡಿಯಲ್ಲಿ ಬರುವ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯಿಂದ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಗ್ರಾಮಗಳ ಮಾರ್ಗವಾಗಿ ವೇದಾವತಿ ನದಿಗೆ ಸೇರುವ ಹಳ್ಳದ ಮುಖಾಂತರ ವಾಣಿ ವಿಲಾಸ ಸಾಗರಕ್ಕೆ ಸರ್ಕಾರದ ನಿರ್ದೇಶನದಂತೆ ದಿನಾಂಕ: 27-07-2025 ರಿಂದ ನೀರನ್ನು ಹರಿಸಲಾಗುವುದು.

 ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯು ಭದ್ರಾ ಜಲಾಶಯದಿಂದ ಪ್ರಾರಂಭವಾಗಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ, ತರೀಕೆರೆ ಕಸಬಾ, ಅಮೃತಾಪುರ, ಅಜ್ಜಂಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹಾದು ಹೋಗಿದ್ದು, ಸರ್ಕಾರದ ನಿರ್ದೇಶನದಂತೆ ದಿನಾಂಕ: 27-07-2025 ರಿಂದ ಶಾಂತಿಪುರ ಪಂಪ್ ಹೌಸ್-1, ಜಂಭದಹಳ್ಳ ಅಕ್ವೆಡಕ್ಟ್, ತರೀಕೆರೆ ರೈಲು ಸೇತುವೆ, ಬೆಟ್ಟತಾವರೆಕೆರೆ ಪಂಪ್ ಹೌಸ್-2, ಅಜ್ಜಂಪುರ ಸುರಂಗದ ಮಾರ್ಗವಾಗಿ ಹೆಟ್ಟೂರು ಗ್ರಾಮದ ಹತ್ತಿರವಿರುವ ವೈ-ಜಂಕ್ಷನ್‌ನಿAದ ಹೆದ್ದೂರು, ಕಾಟಿನಗೆರೆ, ಬೆಣಕುಣಿಸೆ, ಮುಗಳಿ, ಬೇಗೂರು, ಆಸಂದಿ, ಹಡಗಲು, ಕಲ್ಕೆರೆ, ಹೆಚ್. ತಿಮ್ಮಾಪುರ, ಕಲ್ಲಹಳ್ಳಿ, ಚಿಕ್ಕಬಳ್ಳೇಕೆರೆ, ಹನುಮನಹಳ್ಳಿ, ಚೌಳಹಿರಿಯೂರು ಮತ್ತು ಹಿ. ತಿಮ್ಮಾಪುರ ಗ್ರಾಮಗಳ ಮಾರ್ಗವಾಗಿ ಹರಿದು ವೇದಾವತಿ ನದಿಗೆ ಸೇರುವ ಹಳ್ಳದ ಮುಖಾಂತರ ವಾಣಿ ವಿಲಾಸ ಸಾಗರಕ್ಕೆ ನೀರನ್ನು ಹರಿಸಲಾಗುವುದು.

 ಆದ್ದರಿಂದ, ಸಾರ್ವಜನಿಕರ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಕಾಲುವೆ ಹಾಗೂ ಹಳ್ಳದ ಪಾತ್ರಗಳಲ್ಲಿ ಸಾರ್ವಜನಿಕರು ತಿರುಗಾಡುವುದು, ಜನ ಜಾನುವಾರುಗಳನ್ನು ಕಾಲುವೆ ಒಳಗಡೆ ಬಿಡುವುದು ಹಾಗೂ ಇತರೆ ಚಟುವಟಿಕೆಗಳನ್ನು ಮಾಡುವುದು ಮುಂತಾದವುಗಳನ್ನು ನಿಷೇಧಿಸಲಾಗಿದೆ.

 ಈ ಸೂಚನೆಗಳನ್ನು ಉಲ್ಲಂಘಿಸುವುದು, ನಿಗಮದ ಆಸ್ತಿಯಾದ ನೀರಾವರಿ ಕಾಲುವೆ, ಕಟ್ಟಡಗಳನ್ನು ಜಖಂಗೊಳಿಸುವುದು, ಅನಧಿಕೃತವಾಗಿ ಪಂಪ್‌ಸೆಟ್ ಗಳನ್ನು ಅಳವಡಿಸಿ ನೀರನ್ನು ಎತ್ತುವುದು ನೀರಾವರಿ ಕಾಯ್ದೆಯ ವಿವಿಧ ನಿಯಮಗಳ ಪ್ರಕಾರ ಕಾನೂನು ಬಾಹಿರವಾಗಿದ್ದು, ಇದನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಸಾರ್ವಜನಿಕರ ಗಮನಕ್ಕೆ ತರಲಾಗಿದೆ.

Water release to Vani Vilas Sagar 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close