SUDDILIVE || SHIVAMOGGA
ಖೈದಿಯ ಹೊಟ್ಟೆಯ ಒಳಗೆ ಮೊಬೈಲ್ ಪತ್ತೆ-Mobile found in prisoner stomach
ಸೋಗಾನೆಯ ಕೇಂದ್ರ ಕಾರಾಗೃಹ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್ ಫೋನ್ ಹೊರಗೆ ತೆಗೆಯಲಾಗಿದೆ.
ಖೈದಿ ದೌಲತ್ ಅಲಿಯಾಸ್ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್ ಫೋನ್ ಪತ್ತೆಯಾಗಿದೆ.ಪ್ರಕರಣವೊಂದರಲ್ಲಿ ದೌಲತ್ ಅಲಿಯಾಸ್ ಗುಂಡನಿಗೆ ಶಿವಮೊಗ್ಗದ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈತ ಜೂನ್ 24ರಂದು ಜೈಲಿನ ಆಸ್ಪತ್ರೆಗೆ ಬಂದು, ತಾನು ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ. ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದರು. ಎಕ್ಸ್‌ರೇ ಮಾಡಿದಾಗ ಖೈದಿ ದೌಲತ್‌ನ ಹೊಟ್ಟೆಯಲ್ಲಿ ಹೊರಗಿನ ವಸ್ತು ಇರುವುದು ಗೊತ್ತಾಗಿತ್ತು. ಶಸ್ತ್ರಚಿಕಿತ್ಸೆ ನಡೆಸಿದಾಗ ಮೊಬೈಲ್ ಫೋನ್ ಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಿಷೇಧವಿದ್ದರು ಜೈಲಿನೊಳಗೆ ಮೊಬೈಲ್ ಫೋನ್ ತಲುಪಿರುವ ಕುರಿತು ತನಿಖೆ ನಡೆಸುವಂತೆ ಕೇಂದ್ರ ಕಾರಾಗೃಹದ ಅಧೀಕ್ಷಕ ರಂಗನಾಥ್.ಪಿ ಅವರು ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Mobile found in prisoner stomach