SUDDILIVE || SHIVAMOGGA
ನಾಳೆ, ನಾಡಿದ್ದು, ಆಚೆನಾಡಿದ್ದು ವಿದ್ಯುತ್ ವ್ಯತ್ಯಯ-Tomorrow, dayafter tomorrow, power outages
ಹಲವು ಕಾರಣಗಳಿಗೆ ನಾಳೆ ನಾಡಿದ್ದು ಹಾಗೂ ಆಚೆ ನಾಡಿದ್ದು ನಗರದ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.12 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ ಬಡಾವಣೆ, ಚಾಲುಕ್ಯನಗರ, ಕೆ.ಹೆಚ್.ಬಿ. ಕಾಲೋನಿ, ಹಳೆಊರು ಗೋಪಿಶೆಟ್ಟಿಕೊಪ್ಪ, ಗದ್ದೆಮನೆ ಲೇಔಟ್, ಮಂಜಪ್ಪ ಬಸಪ್ಪ ಲೇಔಟ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಕೋರಿದೆ.
ವಿದ್ಯುತ್ ವ್ಯತ್ಯಯ
ಶಿವಮೊಗ್ಗ ನಗರ ಕೋಟೆ ರಸ್ತೆಯಲ್ಲಿ ವಿದ್ಯುತ್ ಕಾಮಗಾರಿ ಹಮ್ಮಿಕೊಂಡಿರುವುದರಿAದ ಜು.14 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಕೋಟೆರಸ್ತೆ, ಬೆಕ್ಕಿನ ಕಲ್ಮಠ, ಓ.ಬಿ.ಎಲ್.ರಸ್ತೆ, ಅಪ್ಪಾಜಿ ರಾವ್ ಕಾಂಪೌAಡ್, ಬಿ.ಹೆಚ್.ರಸ್ತೆ, ಪೆನ್ಷನ್ ಮೊಹಲ್ಲಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಕೋರಿದೆ.
ವಿದ್ಯುತ್ ವ್ಯತ್ಯಯ
ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-17 ಮತ್ತು 18ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು. 13 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಜು.13 ವಿದ್ಯುತ್ ವ್ಯತ್ಯಯ
ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರ ದಿಂದ ಸರಬರಾಜಾಗುವ ಫೀಡರ್ ಎ.ಎಫ್-8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು. 13 ರಂದು ಬೆಳಗ್ಗೆ 09.00 ರಿಂದ ಮಧ್ಯಾಹ್ನ 3.00ರವರೆಗೆ ಲಕ್ಷ್ಮೀಪುರ, ಕೆಂಚಪ್ಪ ಲೇಔಟ್, ಸೂಡಾ ಕಾಂಪ್ಲೆಕ್ಸ್, ಪೊಲೀಸ್ ಚೌಕಿ, ಸವಿ ಬೇಕರಿ ಸುತ್ತಮುತ್ತ, ಹುಚ್ಚುರಾಯ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Tomorrow, dayafter tomorrow, power outages