SUDDILIVE || SHIVAMOGGA
ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ-A minor who gave birth to a male child
- ಶಿವಮೊಗ್ಗ ನಗರದ ಸರ್ಕಾರಿ ಪ್ರೌಢಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಒಂಭತ್ತನೇ ತರಗತಿ ವಿದ್ಯಾರ್ಥಿನಿಗೆ ಶುಕ್ರವಾರ ಮನೆಯಲ್ಲೇ ಹೆರಿಗೆ
- ಬಾಲಕಿ ಮನೆಯಲ್ಲಿ ಮೂತ್ರ ವಿಸರ್ಜನೆಗೆಂದು ಹೋದಾಗ ಮಗುವಿಗೆ ಜನ್ಮ ನೀಡಿದ್ದಾರೆ.ಏಳೂವರೆ ತಿಂಗಳಲ್ಲಿ 1.8 ಕೆ.ಜಿ. ತೂಕದ ಗಂಡು ಮಗುವಿಗೆ ಜನ್ಮ ನೀಡಿದ ಬಾಲಕಿ.
- ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಮಗುವನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಯ ಇನ್ ಕ್ಯುಬೇಟರ್ ನಲ್ಲಿ ಆರೈಕೆ ಮಾಡಲಾಗುತ್ತಿದೆ.
- ಪೋಕ್ಸೋ ಕಾಯ್ದೆ ಅನ್ವಯ ಘಟನೆ ನಡೆದ 24 ಗಂಟೆಯೊಳಗೆ ಪ್ರಕರಣ ದಾಖಲು ಮಾಡಿಕೊಳ್ಳಬೇಕಾಗಿತ್ತು.
- ವಿಳಂಬಕ್ಕೆ ವಿಷಾದ ವ್ಯಕ್ತಪಡಿಸಿದ ಆಯೋಗ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗೆ ಮಾತನಾಡಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ತ್ವರಿತವಾಗಿ ಪ್ರಕರಣ ದಾಖಲು ಮಾಡಿಕೊಳ್ಳಲು ನಿರ್ದೆಶನ ನೀಡಿದ್ದಾರೆ.
- ವಿಳಂಬ ನೀತಿ ಅನುಸರಿಸಿದರೆ ಆಯೋಗವು ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಲು ನಿರ್ಧರಿಸಿದೆ. ಮೆಗ್ಗಾನ್ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರಿಗೆ ಮಾತನಾಡಿದ ಶಶಿಧರ ಕೋಸಂಬೆ, ಅಪ್ರಾಪ್ತ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.
ಯಾದಗಿರಿ ಜಿಲ್ಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮಗುವಿನ ಜನ್ಮ ನೀಡಿದ ಪ್ರಕರಣದ ಬೆನ್ನಿಗೆ ಇಂತಹುದೆ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಎರಡು ದಿನದ ಹಿಂದೆ 9ನೇ ತರಗತಿಯ ವಿದ್ಯಾರ್ಥಿನಿ (Student) ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
15 ವರ್ಷದ ಬಾಲಕಿಯೊಬ್ಬಳು ಈಚೆಗೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಕಳೆದ ಎರಡು ದಿನದ ಹಿಂದೆ ಮನೆಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. 7 ತಿಂಗಳ ಗಂಡು ಶಿಶು 1.8 ಕೆ.ಜಿ ತೂಕವಿದೆ. ಕೂಡಲೆ ಮಗು ಮತ್ತು ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು, ವಿಷಯ ತಿಳಿಯುತ್ತಿದ್ದಂತೆ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ ಹಾಗೂ ಪೊಲೀಸರು ಬಾಲಕಿಯ ವಿಚಾರಣೆ ನಡೆಸಿದರು. ಈ ಸಂದರ್ಭ ಬಾಲಕಿ ಗೊಂದಲದ ಹೇಳಿಕೆ ನೀಡಿದ್ದಾಳೆ ಎಂದು ತಿಳಿದು ಬಂದಿದೆ.
A minor who gave birth to a male child
