SUDDILIVE || SHIVAMOGGA
ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ-ABVP protests demanding appointment of guest lecturers
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನ ನೇಮಿಸಿಕೊಳ್ಳುವಂತೆ ಆಗ್ರಹಿಸಿ ರಾಜ್ಯಾದ್ಯಂತ ಎಬಿವಿಪಿಯ ಕರೆಗೆ ಶಿವಮೊಗ್ಗದಲ್ಲೂ ಪ್ರತಿಭಟಿಸಲಾಯಿತು.
ಪದವಿ ತರಗತಿಗಳು ಆರಂಭವಾಗಿ ತಿಂಗಳು ಕಳೆದರೂ ಯಾವುದೇ ಉಪನ್ಯಾಸಕರನ್ನ ನೇಮಿಸಿಕೊಂಡಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ತರಗತಿಗಳು ನಡೆಯುತ್ತಿಲ್ಲ ರಾಜ್ಯದ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರಿಂದ ಅವಲಂಬಿತರಾಗಿರುವ ಕಾರಣ ಹಲವಾರು ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆ ಆಗುತ್ತಿದೆ.
ಖಾಸಗಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆದು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಳ್ಳಲು ಅನುಕೂಲವಾಗುತ್ತಿದೆ ಆದರೆ ಶೇಕಡ 50ರಷ್ಟು ಉಪನ್ಯಾಸಕರ ಮೇಲೆ ಅವಲಂಬಿತರಾಗಿರುವ ಸರ್ಕಾರಿ ಕಾರ್ಯ ಕಾಲೇಜುಗಳಲ್ಲಿ ಓದು ವಿದ್ಯಾರ್ಥಿಗಳಿಗೆ ಸರ್ಕಾರ ಅನ್ಯಾಯ ಮಾಡಿದಂತಾಗಿದೆ ಕೂಡಲೇ ರಾಜ್ಯ ಸರ್ಕಾರ ಈ ಕುರಿತು ಗಂಭೀರವಾಗಿ ಪರಿಗಣಿಸಿ, ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಹುಡುಕಿ ಕೊಡಬೇಕೆಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಮನವಿಯಲ್ಲಿ ಆಗ್ರಹಿಸಿದೆ.
ABVP protests