SUDDILIVE || HOSANAGARA
ನೀರಿಗೆ ವಿಷ ಬೆರೆಸಿದ ಪ್ರಕರಣ-ಸಿಎಂ ಆತಂಕ-CM concerned over poisoning of water
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಣಿ ಶಾಲೆಯಲ್ಲಿ ನೀರಿನ ತೊಟ್ಟಿಗೆ ವಿಷ ಬೆರೆಸಿದ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.
ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ.ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ.
ಶಾಲೆಯ ಅಡುಗೆ ಸಿಬ್ಬಂದಿಗಳನ್ನು ಅಭಿನಂದಿಸುತ್ತೇನೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಕುಡಿಯುವ ನೀರಿಗೆ ವಿಷ ಬೆರೆಸುವ ಮನಸ್ಥಿತಿ ನಮ್ಮ ನಡುವೆ ಮಾನವೀಯತೆಯ ಅಧಃಪತನವನ್ನು ತೋರಿಸುತ್ತದೆ.
ಈ ಬಗ್ಗೆ ಎಲ್ಲರೂ ಆತ್ಮವಿಮರ್ಷೆ ಮಾಡಿಕೊಳ್ಳಬೇಕಿದೆ ಎಂದು ಎಕ್ಸ್ ನಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
CM concerned over poisoning of water
