SUDDILIVE || SHIVAMOGGA
ಆ.27 ರಿಂದ ಸೆ.15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್ /ಸಿಡಿಮದ್ದು ನಿಷೇಧ-Color paper blasting/fireworks banned from August 27 to September 15
ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ದಿನಾಂಕ:27-08-2025 ರಿಂದ 15-09-2025 ರವರೆಗೆ ಜಿಲ್ಲೆಯಾದ್ಯಂತ ಕಲರ್ ಪೇಪರ್ ಬ್ಲಾಸ್ಟಿಂಗ್. ಸಿಡಿಮದ್ದು ಸಿಡಿಸುವುದನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಆದೇಶಿಸಿದ್ದಾರೆ.
ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಕುರಿತು ಸೂಚನೆಗಳು
2025ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೆಲವು ನಿರ್ದೇಶನಗಳನ್ನು ನೀಡಿದ್ದು, ಅದರಂತೆ ಕ್ರಮಕೈಗೊಳ್ಳಲು ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬAಧ ಈ ಕೆಳಕಂಡAತೆ ಸೂಚನೆಗಳನ್ನು ನೀಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿಸುವ /ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹ/ ಬಣ್ಣಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸುವುದು.
ಗೌರಿಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ, ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮವಹಿಸುವುದು.
ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗಳೊಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು. ಏಕಬಳಕೆ ಪ್ಲಾಸ್ಟಿಕ್ ಉಪಯೋಗಿಸುವುದು ಹಾಗೂ ರಾತ್ರಿ 10.00 ರಿಂದ ಬೆ 6.00 ರವರೆಗೆ ಧ್ವನಿವರ್ಧಕಗಳ ಬಳಕೆ ನಿಷೇಧಿಸಿದೆ. ಹಸಿರು ಪಟಾಕಿಗಳ ಹೊರತಾಗಿ ಯಾವುದೇ ಪಟಾಕಿಗಳನ್ನು ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಗಣೇಶ ಮೂರ್ತಿಯ ವಿಸರ್ಜನೆ ಸಂದರ್ಭದಲ್ಲಿ ತೆಪ್ಪ ಬಳಕೆ ಮಾಡಿದ್ದಲ್ಲಿ ಕೇವಲ ಎರಡರಿಂದ ಮೂರು ಜನರಿಗೆ ಮಾತ್ರ ತೆಪ್ಪದಲ್ಲಿ ಹೋಗಲು ಅವಕಾಸ. ಕಡ್ಡಾಯವಾಗಿ ಲೈಫ್ ಜಾಕೇಟ್ ಬಳಸಿಕೊಂಡು ನುರಿತ ಈಜುಗಾರರ ಸಮ್ಮುಖದಲ್ಲಿ ಗಣಪತಿ ವಿಸರ್ಜಿಸಿಸುವುದು. ಆ.27 ರಿಂದ ಸೆ.15ರವರೆಗೆ ಜಿಲ್ಲಾದ್ಯಂತ ಬೈಕ್ ರ‍್ಯಾಲಿ, ಡಿ.ಜಿ. ಸಿಸ್ಟಂ ಬಳಕೆ ಹಾಗೂ ಕಲರ್ ಪೇಪರ್ ಬ್ಲಾಸ್ಟಿಂಗ್/ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
Color paper blasting banned