SUDDILIVE || THIRTHAHALLI
ದಂಪತಿಗಳ ಆತ್ಮಹತ್ಯೆ- Couple suicide
ಮನನೊಂದು ದಂಪತಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಮಾಳೂರು ವ್ಯಾಪ್ತಿಯ ಬಿಳುವೆಗ್ರಾಮದ ಕಣಬೂರು ಸಮೀಪದ ಹಲ್ಯಾಪುರದಲ್ಲಿ ನಡೆದಿದೆ.
ಮನೆಗಾಗಿ ಸಾಲ ಮಾಡಿಕೊಂಡಿದ್ದ ದಂಪತಿಗಳು ಹಾಗೂ ಮನೆಯಲ್ಲಿ ನಡೆದ ಸಣ್ಣ ಪುಟ್ಟ ಕಿರಿ ಕಿರಿಯಿಂದಾಗಿ ಮನನೊಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ದಂಪತಿಗಳಿಬ್ಬರು ಮನೆಯಿಂದ 200 ಮೀ ದೂರದ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡ ನಾಯ್ಕ್ (72 ವರ್ಷ ) ಲಕ್ಷ್ಮಮ್ಮ (58 ವರ್ಷ ) ಆತ್ಮಹತ್ಯೆ ಮಾಡಿಕೊಂಡ ದಂಪತಿಗಳಾಗಿದ್ದಾರೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Couple suicide