SUDDILIVE || BHADRAVATHI
ಶಿಕ್ಷಕನ ಕೊಲೆಗಾರರಿಗೆ ಗಲ್ಲುಶಿಕ್ಷೆ-Death penalty for teacher killers
ಸರ್ಕಾರಿ ಶಾಲೆ ಶಿಕ್ಷಕರೊಬ್ಬರನ್ನು ಕ್ರೂರವಾಗಿ ಹತ್ಯೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆ ಅವರ ಪತ್ನಿ ಸೇರಿ ಇಬ್ಬರಿಗೆ ಮರಣದಂಡನೆ ವಿಧಿಸಿ ಭದ್ರಾವತಿಯ ನಾಲ್ಕನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಆದೇಶಿಸಿದೆ. ನಾಲ್ಕನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚಿಟ್ಟಿಯಾರ ಅವರು ಇಂದು ತೀರ್ಪು ಪ್ರಕಟಿಸಿದ್ದಾರೆ.
ಘಟನೆ ಏನು?
2016ರ ಜುಲೈ 7ರಂದು ಜನ್ನಾಪುರದಲ್ಲಿ ಶಿಕ್ಷಕ ಇಮ್ತಿಯಾಜ್ ಎಂಬುವವರನ್ನು ಹತ್ಯೆ ಮಾಡಲಾಗಿತ್ತು. ಅವರ ಮೃತದೇಹವನ್ನು ನೈನಾಲ್ ದಾರದಲ್ಲಿ ಕಟ್ಟಿ ಭದ್ರಾವತಿ ಹೊಸ ಸೇತುವೆ ಸಮೀಪ ಭದ್ರಾ ನದಿಯಲ್ಲಿ ಎಸೆಯಲಾಗಿತ್ತು. ತನಿಖೆ ನಡೆಸಿದ ನ್ಯೂಟೌನ್ ಠಾಣೆ ಪೊಲೀಸರು ಶಿಕ್ಷಕ ಇಮ್ತಿಯಾಜ್ ಪತ್ನಿ ಲಕ್ಷ್ಮಿ, ಆಕೆಯ ಪ್ರಿಯಕರ ಕೃಷ್ಣಮೂರ್ತಿ ಅಲಿಯಾಸ್ ಕಿಟ್ಟಿ, ಶಿವರಾಜ್ ಅಲಿಯಾಸ್ ಶಿವು ಎಂಬುವವರನ್ನ ಬಂಧಿಸಿದ್ದರು.
ಹತ್ಯೆ ಬಳಿಕ ನೈಲಾನ್ ದಾರ, ಬೆಡ್‌ಶೀಟ್‌ನಿಂದ ಮೃತದೇಹವನ್ನು ಸುತ್ತಿ ಇನ್ನೋವಾ ಕಾರಿನಲ್ಲಿ ಕೊಂಡೊಯ್ದು ಭದ್ರಾವತಿ ಹೊಸ ಸೇತುವೆ ಬಳಿ ಭದ್ರಾ ನದಿಗೆ ಎಸೆದಿದ್ದರು. ಮೃತದೇಹ ಸಾಗಿಸಲು ಶಿವರಾಜ್‌ನ ನೆರವು ಪಡೆದಿದ್ದರು ಎಂದು ಆರೋಪಿಸಲಾಗಿತ್ತು.
ಗಲ್ಲು ಶಿಕ್ಷೆ
ಪ್ರಕರಣದ ತನಿಖೆ ನಡೆಸಿದ ನ್ಯೂಟೌನ್ ಠಾಣೆ ಇನ್ಸ್‌ಪೆಕ್ಟರ್ ಚಂದ್ರಶೇಖರ.ಟಿ.ಕೆ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಭದ್ರಾವತಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಕೊಲೆ ಆರೋಪ ಸಾಬೀತಾಗಿದೆ. ಈ ಹಿನ್ನೆಲೆ ಶಿಕ್ಷಕಿ ಲಕ್ಷ್ಮಿ ಮತ್ತು ಕೃಷ್ಣಮೂರ್ತಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಸಾಕ್ಷಿ ನಾಶಕ್ಕೆ ನೆರವಾದ ಶಿವರಾಜ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಇನ್ನು, ಮೃತ ಶಿಕ್ಷಕ ಇಮ್ತಿಯಾಜ್ ಅವರ ತಾಯಿಗೆ ₹10 ಲಕ್ಷ ಪರಿಹಾರ ನೀಡುವಂತೆ ಆದೇಶಿಸಲಾಗಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ರತ್ನಮ್ಮ ಅವರು ವಾದ ಮಂಡಿಸಿದ್ದರು.
Death penalty for teacher killers