SUDDILIVE || SHIVAMOGGA
ಜಿಲ್ಲೆಯ ಎರಡು ತಾಲೂಕಿನಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ-Holiday for schools and colleges tomorrow in two talukas of the district
ನಾಳೆ ಜಿಲ್ಲೆಯಲ್ಲಿ ಹವಮಾನ ಇಲಾಖೆಯ ಮಳೆ ಎಚ್ಚರಿಕೆ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ಎರಡು ತಾಲೂಕಿನಲ್ಲಿ ಆರೆಂಜ್ ಅಲರ್ಟ್ ಇರುವ ಕಾರಣ ಹಾಗೂ ಇಂದು ಸುರಿದ ಮಳೆಯ ಹಿನ್ನಲೆಯಲ್ಲಿ ಸಧ್ಯಕ್ಕೆ ಜಿಲ್ಲೆಯ ಎರಡು ತಾಲೂಕಿನಲ್ಲಿ ಅಂಗನವಾಡಿ, ಪಿಯು, ಡಿಪ್ಲಮೋ ಕಾಲೇಜು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಸಾಗರ ಮತ್ತು ಹೊಸನಗರ ತಾಲೂಕಿನಲ್ಲಿ ರಜೆ ಘೋಷಿಸಲಾಗಿದ್ದು, ತಹಶೀಲ್ದಾರ್ ಗಳು ಈ ನಿರ್ಧಾರವನ್ನ ಕೈಗೊಳ್ಳಲಾಗಿದ್ದು ಈ ರಜೆಯನ್ನ ಮುಂದಿನ ರಜಾ ದಿನಗಳಲ್ಲಿ ಸರಿದೂಗಿಸಿಕೊಳ್ಳಲು ಸೂಚಿಸಲಾಗಿದೆ.
Holiday for schools and colleges tomorrow in two talukas of the district

