SUDDILIVE || SHIVAMOGGA
ಲಾಡ್ಜ್, ಪಿಜಿ ಮತ್ತು ಹೋಸ್ಟೇಗಳ ತಪಾಸಣೆ-Inspection of lodges, PGs and hostels
ಶಿವಮೊಗ್ಗದ ಹಲವು ಲಾಡ್ಜ್, ಹೋಂಸ್ಟೇ ಮತ್ತು ಪಿಜಿಗಳಲ್ಲಿ ನಿನ್ನೆ ತಪಾಸಣೆ ನಡೆದಿದೆ. ಗಣೇಶ ಮತ್ತು ಈದ್ ಹಿನ್ನಲೆಯಲ್ಲಿ ಜಿಲ್ಲೆಯ ವಿವಿದ ಪೊಲೀಸ್ ಠಾಣೆಗಳಲ್ಲಿ ಬರುವ ಹಲವು ಲಾಡ್ಜ್ ಗಳಿಗೆ ಪೊಲೀಸರು ಭೇಟಿ ನೀಡಿ ಲಾಡ್ಜ್ ಮಸಲೀಜರು ಮತ್ತು ನಿರ್ವಾಹಕರಿಗೆ ತಿಳುವಳಿಕೆ ನೀಡಲಾಯಿತು.
ದಿನಾಂಕಃ 17-08-2025 ರಂದು ಸಂಜೆ ಮಿಥುನ್ ಕುಮಾರ್ ಜಿ. ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಕಾರಿಯಪ್ಪ ಎ ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಮತ್ತು ಎಸ್ ರಮೇಶ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರವರ ಮಾರ್ಗದರ್ಶನದಲ್ಲಿ, ಜಿಲ್ಲೆಯ ವಿವಿಧ ಪೊಲೀಸ್ ಉಪ ವಿಭಾಗಗಳ ಪೊಲೀಸ್ ಉಪಾಧೀಕ್ಷಕರವರ ಮೇಲ್ವಿಚಾರಣೆಯಲ್ಲಿ, ಶಿವಮೊಗ್ಗ ಜಿಲ್ಲೆಯದ್ಯಂತ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರವರ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡವು ಆಯಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿರುವ ಲಾಡ್ಜ್, ಪೇಯಿಂಗ್ ಗೆಸ್ಟ್ ಮತ್ತು ಹೋಂ ಸ್ಟೇ ಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿರುತ್ತಾರೆ.
ತಪಾಸಣೆಯ ಸಂದರ್ಭದಲ್ಲಿ ಲಾಡ್ಜ್, ಪಿ.ಜಿ. ಮತ್ತು ಹೋಂ ಸ್ಟೇ ಗಳಿಗೆ ಬಂದು ತಂಗಿರುವ ಗ್ರಾಹಕರ ಮಾಹಿತಿಯನ್ನು ರಿಜಿಸ್ಟರ್ ನಲ್ಲಿ ನಮೂದು ಮಾಡಿರುವುದನ್ನು ಮತ್ತು ಲಾಡ್ಜ್ ಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿರುವ ಬಗ್ಗೆ ಹಾಗೂ ಅವುಗಳು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಸುತ್ತಿರುವ ಬಗ್ಗೆ ಹಾಗೂ ವಿಶೇಷವಾಗಿ ಕಳೆದ 15 ದಿನಗಳಲ್ಲಿ ಬಂದು ತಂಗಿದ್ದ ಗ್ರಾಹಕರ ಮಾಹಿತಿಯನ್ನು ಪರಿಶೀಲನೆ ಮಾಡಲಾಗಿದೆ.
ಆನಂತರ ಲಾಡ್ಜ್, ಪಿ.ಜಿ. ಮತ್ತು ಹೋಂ ಸ್ಟೇ ಗಳ ವ್ಯವಸ್ಥಾಪಕರಿಗೆ ತಂಗಲು ಬರುವ ಗ್ರಾಹಕರುಗಳ ಹೆಸರು, ವಿಳಾಸ ಹಾಗೂ ಮೊಬೈಲ್ ನಂಬರ್ ಸೇರಿದತೆ ಸಂಪೂರ್ಣ ಮಾಹಿತಿಯನ್ನು ಪಡೆದು ರಿಜಿಸ್ಟರ್ ನಲ್ಲಿ ನಮೂದು ಮಾಡಲು, ಗ್ರಾಹಕರು ನೀಡುವ ಮೊಬೈಲ್ ಸಂಖ್ಯೆಯನ್ನು ಪರಿಶೀಲಿಸಿ ಅವರದ್ದೇ ಮೊಬೈಲ್ ನಂಬರ್ ಎಂದು ಖಚಿತ ಪಡಿಸಿಕೊಳ್ಳಲು, ಗ್ರಾಹಕರ ಐಡಿ ಕಾರ್ಡ್ ನ ಜೆರಾಕ್ಸ್ ಪ್ರತಿಯನ್ನು ಪಡೆಯಲು, ಲಾಡ್ಜ್ ಗೆ ಬರುವ ಗ್ರಾಹಕರ ತಂಗುವ ಉದ್ದೇಶವನ್ನು ಕೇಳಿ ಪಡೆದು ರಿಜಿಸ್ಟರ್ ನಲ್ಲಿ ನೋಂದಾಯಿಸಲು ಸೂಚನೆ ನೀಡಿರುತ್ತಾರೆ.
ಒಂದುವೇಳೆ ಗ್ರಾಹಕರುಗಳ ಬಗ್ಗೆ ಯಾವುದೇ ಅನುಮಾನ ಕಂಡು ಬಂದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸೂಚನೆಗಳನ್ನು ಸಹಾ ನೀಡಲಾಯಿತು.
Inspection of lodges, PGs and hostels