ad

ಶಿಕ್ಷಣ ಕ್ಷೇತ್ರ ಸುಧಾರಣೆಗೆ ಸಚಿವ ಮಧು ಬಂಗಾರಪ್ಪ ಪರಿಶ್ರಮ: ಚೈತ್ರ ಮೋಹನ್-Minister Madhu Bangarappa's efforts to improve the education sector

SUDDILIVE || SHIVAMOGGA

ಶಿಕ್ಷಣ ಕ್ಷೇತ್ರ ಸುಧಾರಣೆಗೆ ಸಚಿವ ಮಧು ಬಂಗಾರಪ್ಪ ಪರಿಶ್ರಮ: ಚೈತ್ರ ಮೋಹನ್-Minister Madhu Bangarappa's efforts to improve the education sector: Chaitra Mohan

Madhu, Bangarappa

ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆತಲ್ಲಿ ಅವರು ಉನ್ನತ ಪ್ರಜೆಗಳಾಗುತ್ತಾರೆ. ಆದ್ದರಿಂದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಪ್ರಯತ್ನಿಸುತ್ತಿದೆ. ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪನವರ ಪರಿಶ್ರಮ ಅಪಾರವಾಗಿದೆ ಎಂದು ಹಸೂಡಿ ಗ್ರಾಪಂ ಅಧ್ಯಕ್ಷೆ ಚೈತ್ರ ಆರ್. ಮೋಹನ್ ಹೇಳಿದರು.

 ತಾಲೂಕಿನ ಚಿಕ್ಕಮರಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 06-08-2025ರ ಮಂಗಳವಾರ ಮಧ್ಯಾಹ್ನ ಹಮ್ಮಿಕೊಂಡಿದ್ದ ಮಕ್ಕಳ ಗ್ರಾಮ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

 ಪಠ್ಯಕ್ರಮ, ಬೋಧನಾ ವಿಧಾನ, ಪರೀಕ್ಷಾ ಪದ್ಧತಿಯಲ್ಲಿ ಸುಧಾರಣೆ ತರಲಾಗುತ್ತಿದೆ. ಉತ್ತಮ ಕೊಠಡಿ, ಕುಡಿಯುವ ನೀರು, ಶೌಚಾಲಯ, ಲ್ಯಾಬ್, ಗ್ರಂಥಾಲಯ ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳು ಕಮ್ಮಿ ಇಲ್ಲ ಎಂಬAತೆ ಸುಧಾರಣೆಗಳು ಕಂಡು ಬರುತ್ತಿದೆ. ಸರ್ಕಾರಿ ಶಾಲೆಗಳಲ್ಲಿಯೂ ಗುಣಾತ್ಮಕ ಶಿಕ್ಷಣ ಸಿಗಬೇಕೆಂಬುವುದು ಸಚಿವರ ಆಶಯವಾಗಿದೆ ಎಂದರು.

 ಜಗತ್ತು ಅತಿ ವೇಗವಾಗಿ ಬದಲಾಗುತ್ತಿದೆ. ತಂತ್ರಜ್ಷಾನ ಎಲ್ಲೆಡೆ ಆವರಿಸಿಕೊಂಡಿದೆ. ಇದಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಅವಶ್ಯಕವಾಗಿದೆ. ಶಿಕ್ಷಣದ ಗುಣಮಟ್ಟ ಸುಧಾರಣೆಯಾಗದ ಹೊರತು ಉತ್ತಮ ಫಲಿತಾಂಶ ನಿರೀಕ್ಷಿಸುವುದು ಸಾಧ್ಯವಾಗದು ಎಂದು ಹೇಳಿದರು. 

ಪಂಚಾಯತಿಯೇ ಮಕ್ಕಳ ಬಳಿ ಹೋಗಿ ಅವರ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಮಕ್ಕಳ ಗ್ರಾಮ ಸಭೆ ಹಮ್ಮಿಕೊಂಡಿರುವುದು ಉತ್ತಮ ಕಾರ್ಯವಾಗಿದೆ. ವಿದ್ಯಾರ್ಥಿಗಳು ಇದರಲ್ಲಿ ಮುಕ್ತವಾಗಿ ಭಾಗಿಯಾಗಬೇಕು. ಪ್ರಜಾಸತ್ತಾತ್ಮಕ ಮೌಲ್ಯಗಳ ಬೆಳವಣಿಗೆಗೆ ಈ ಸಭೆ ಪೂರಕವಾಗಿದೆ ಎಂದು ಅಭಿಪ್ರಾಯಪಟ್ಟರು.

ಗ್ರಾಮಸಭೆಯಲ್ಲಿ ಪಾಲ್ಗೊಂಡಿದ್ದ ಮಕ್ಕಳು ಕ್ರೀಡಾ ಸಮವಸ್ತç ನೀಡಬೇಕು, ಶಾಲಾ ಆವರಣದಲ್ಲಿ ಅಹಿತಕರ ಚಟುವಟಿಕೆಗಳನ್ನು ತಡೆಗಟ್ಟಲು ಸಿಸಿ ಕ್ಯಾಮರಾ ಅಳವಡಿಸಬೇಕು, ದ್ವಿಭಾಷಾ ಮಾಧ್ಯಮಕ್ಕೆ ಉತ್ತು ನೀಡಬೇಕೆಂಬುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಪ್ರಸ್ತಾಪಿಸಿದರು.

ಹಸೂಡಿ ಗ್ರಾಪಂ ಪಿಡಿಓ ರಾಜಪ್ಪ, ಎಸ್‌ಡಿಎಂಸಿ ಅಧ್ಯಕ್ಷೆ ಜ್ಯೋತಿ ಎಂ., ಗ್ರಾಪಂ ಸದಸ್ಯರುಗಳಾದ ಶ್ರೀನಿವಾಸ್, ಜಯಲಕ್ಷ್ಮಿ ಮುಖ್ಯ ಶಿಕ್ಷಕಿ ಆನಂದಜ್ಯೋತಿ ಆರ್., ಪಂಚಾಯತಿ ಸಿಬ್ಬಂದಿ, ಪೋಷಕರು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆ ಲಕ್ಷಿö್ಮದೇವಿ ವಿದ್ಯಾರ್ಥಿ ಪ್ರತಿನಿಧಿಗಳಾದ ಅನುಷಾ, ವಿಶ್ವಾಸ್ ಮತ್ತಿತರರು ಭಾಗವಹಿಸಿದ್ದರು.

Minister Madhu Bangarappa's efforts to improve the education sector

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close