ad

ಸಂಯುಕ್ತ ಕಿಸಾನ್ ಮೋರ್ಚಾದಿಂದ ಪ್ರತಿಭಟನೆ-Protest by Samyukta Kisan Morcha

SUDDILIVE || SHIVAMOGGA

ಸಂಯುಕ್ತ ಕಿಸಾನ್ ಮೋರ್ಚಾದಿಂದ ಪ್ರತಿಭಟನೆ-Protest by Samyukta Kisan Morcha

Kisan, Morcha


ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಮೇಲ್ಕಂಡ ಸಂಘಟನೆಯ ವತಿಯಿಂದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹೆಚ್.ಆರ್. ಬಸವರಾಜಪ್ಪ ಬಣ) ರಾಜ್ಯ ಉಪಾಧ್ಯಕ್ಷ ಹಿಟ್ಟೂರು ರಾಜು 50 ವರ್ಷ ಒಕ್ಕಲಿಗ ಜನಾಂಗ, ವಾಸ ಹಿಟ್ಟೂರು ಶಿವಮೊಗ್ಗ ತಾಲ್ಲೂಕು ನೇತೃತ್ವದಲ್ಲಿ 60 ಜನರು ಸೇರಿ ಈ ಕೆಳಕಂಡ ವಿಚಾರದಲ್ಲಿ ರಾಜ್ಯ ಕರೆಯ ಮೇರೆಗೆ ಪ್ರತಿಭಟನೆ ನಡೆಸಿ ಮುಕ್ತಾಯ ಮಾಡಿರುತ್ತಾರೆ.

ಸ್ವಾತಂತ್ರ ಚಳವಳಿಯ ಐತಿಹಾಸಿಕ ಭಾರತ ಬಿಟ್ಟು ತೊಲಗಿ ಚಳುವಳಿಯ 83ನೇ ವಾರ್ಷಿಕ ಆಚರಣೆಯ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಆ. 13ರಂದು ದೇಶಾದ್ಯಂತ ಬಹುರಾಷ್ಟ್ರೀಯ ಕಂಪನಿಗಳೇ ಹಾಗೂ ಕಾರ್ಪೋರೇಟ್ ಕಂಪನಿಗಳೇ ದೇಶಬಿಟ್ಟು ತೊಲಗಿ ಎಂಬ ಘೋಷಣೆಯೊಂದಿಗೆ ಪ್ರತಿಭಟನೆಯನ್ನು ಹಮ್ಮಿಕೊಂಡಿವೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಅನುಸರಿಸುತ್ತಿರುವ ಕಾರ್ಪೋರೇಟ್ ಧೋರಣೆಗಳಿಂದಾಗಿ ದೇಶದ ದುಡಿಯುವ ಜನತೆ ಅಪಾರ ಪ್ರಮಾಣದ ಸಂಕಷ್ಟವನ್ನು ಅನುಭವಿಸುವಂತಾಗಿದೆ. ಪ್ರತಿಯೊಂದು ವಲಯದಲ್ಲೂ ದೇಶ ಹಾಗೂ ವಿದೇಶದ ಬಹುರಾಷ್ಟ್ರೀಯ ಮತ್ತು ಗುತ್ತೇದಾರಿ ಕಂಪನಿಗಳ ಹಿಡಿತ ಬಲಗೊಳ್ಳುತ್ತಿದ್ದು, ಸಂವಿಧಾನ ಖಾತರಿಪಡಿಸಿರುವ ಪ್ರತಿಯೊಂದು ಹಕ್ಕಿಗೂ ತೊಂದರೆ ಉಂಟುಮಾಡುತ್ತಿದೆ.

ದೊಡ್ಡ ದೊಡ್ಡ ಕಾರ್ಪೋರೇಟ್ ಕಂಪನಿಗಳ ಲಾಭದ ಹಿತರಕ್ಷಣೆಗಾಗಿ ಕೋಟ್ಯಾಂತರ ಭಾರತೀಯರ ಹಿತವನ್ನು ಕೇಂದ್ರ ಸರ್ಕಾರ ಬಲಿಕೊಡುತ್ತಿದೆ. 

ದೇಶದ ಕೃಷಿ ವಲಯವನ್ನು ಹಾಗೂ ಕೃಷಿ ಉತ್ಪನ್ನಗಳ ಮಾರುಕಟ್ಟೆಯನ್ನು ವಿದೇಶಿ ಧೈತ್ಯ ಬಹುರಾಷ್ಟ್ರೀಯ ಕಂಪನಿಗಳಿಗೆ ಸುಂಕ ರಹಿತವಾಗಿ ತೆರೆಯಲಾಗುತ್ತಿದೆ.  

ಭಾರತದ ಒಟ್ಟಾರೆ ಹಿತಕ್ಕೆ ವಿರುದ್ಧವಾಗಿ ಬ್ರಿಟನ್ ಜೊತೆಗಿನ ಒಪ್ಪಂದವನ್ನು ಅಮಾನತ್ತುಮಾಡಬೇಕು ಹಾಗೂ ಸಾಮ್ರಾಜ್ಯಶಾಹೀ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್‌ರವರ ಸುಂಕ ಹೇರಿಕೆ ಹಾಗೂ ದಂಡ ಬೆದರಿಕೆಯನ್ನು ಸಮರ್ಥವಾಗಿ ಎದುರಿಸಿ ಭಾರತದ ಸಾರ್ವಭೌಮತ್ವವನ್ನು ಕಾಪಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿ ಈ ಪ್ರತಿಭಟನೆಯನ್ನು ನಡರಸಿರುತ್ತಾರೆ.

ಸದರಿ ಪ್ರತಿಭಟನೆಯಲ್ಲಿ ಜಿಲ್ಲಾ ಸಿ ಐ ಟಿ ಯು ಜಿಲ್ಲಾ ಸಂಚಾಲಕ ನಾರಾಯಣ, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಮುಖಂಡ ಹಾಲೇಶಪ್ಪ ಜಿಲ್ಲಾ ಬಿಸಿಯೂಟ ಸಂಚಾಲಕಿ ಹನುಮಕ್ಕ ಸೇರಿದಂತೆ ಇತರರು ಭಾಗವಹಿಸಿದ್ದರು.ಪ್ರತಿಭಟನಕಾರರು ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕಾರಿ ಆಡಳಿತ ಮಲ್ಲಿಕಾ ಎಂ.ಜಿ.  ರವರಿಗೆ ಮನವಿ ಸಲ್ಲಿಸಿರುತ್ತಾರೆ.ಪ್ರತಿಭಟನೆ ರಾಷ್ಟ್ರೀಯ ಕರೆಯಾಗಿತ್ತು.

Protest by Samyukta Kisan Morcha

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close