ad

ಪೋಕ್ಸೋ ಅಪರಾಧಿಗೆ ಶಿಕ್ಷೆ ಪ್ರಕಟ-Punishment announced for POCSO offender

SUDDILIVE || BHADRAVATHI

ಪೋಕ್ಸೋ ಅಪರಾಧಿಗೆ ಶಿಕ್ಷೆ ಪ್ರಕಟ-Punishment announced for POCSO offender


Pocso, Punishnent

ಪೋಕ್ಸೋ ಅಪರಾಧಿಗೆ ಮಾನ್ಯ ನ್ಯಾಯಾಲಯ ತೀರ್ಪು ನೀಡಿ ಶಿಕ್ಷೆ ಪ್ರಕಟಿಸಿದೆ. 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ 1,61,000/- ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ. 

2024 ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ವ್ಯಕ್ತಿಯೊಬ್ಬನು 15 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿರುತ್ತಾನೆಂದು ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಕಲಂ 448 376(2) (ಎನ್), 376 (2)(ಎಫ್) ಐಪಿಸಿ ಮತ್ತು ಕಲಂ 5 (ಜೆ)(2) 5(ಎಲ್), 6  ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿರುತ್ತದೆ.

ಪ್ರಕರಣದ ತನಿಖಾಧಿಕಾರಿಗಳಾದ ಶ್ರೀಶೈಲ ಕುಮಾರ , ಸಿಪಿಐ ಭದ್ರಾವತಿ ನಗರ ವೃತ್ತ ರವರು ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣಾಶಿಕ್ಷೆಯನ್ ಪತ್ರವನ್ನು ಸಲ್ಲಿಸಿರುತ್ತಾರೆ. 

ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ  ಶ್ರೀಧರ್ ಹೆಚ್. ಆರ್, ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದು, ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-1 ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿಯ ವಿರುದ್ಧ ಆರೋಪ ದೃಡ ಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ ನಿಂಗನ ಗೌಡ ಭ ಪಾಟೀಲ್ ರವರು ಪ್ರಕರಣದ ಆರೋಪಿತನಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ 1,61,000/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ 02 ವರ್ಷ ಹೆಚ್ಚುವರಿ ಸಾದಾ ಕಾರಾವಾಸ ಶಿಕ್ಷೆ ನೀಡಲು ಆದೇಶಿಸಿರುತ್ತಾರೆ.

Punishment announced for POCSO offender

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close